ಹನೂರು : ಹನೂರು ಪಟ್ಟಣದ ಹೊರವಲಯದ ಹುಣಸೆ ಗುಡ್ಡೆ ಬಳಿ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ. ಸಾವನ್ನಪ್ಪಿದ ಯುವಕ ಕಣ್ಣೂರು ಗ್ರಾಮದ ನಂದೀಶ್ (೨೫) ಎಂದು ತಿಳಿದು ಬಂದಿದೆ.
ಬೈಕ್ ನಲ್ಲಿ ತಮ್ಮ ಸ್ವ ಗ್ರಾಮವಾದ ಹನೂರು ತಾಲೂಕಿನ ಕಣ್ಣುರು ಗ್ರಾಮದ ಮನೆಗೆ ತಡ ರಾತ್ರಿ ೧೨ ಗಂಟೆ ಸಮಯದಲ್ಲಿ ಹೋಗುತ್ತಿದ್ದ ನಂದೀಶ್ ನಿಯಂತ್ರಣ ತಪ್ಪಿ ಚಲಿಸುತ್ತಿದ್ದಂತಹ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಹನೂರು ಪೊಲೀಸ್ ಠಾಣೆಯ ಪೊಲೀಸರುಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ ಇನ್ನು ಮೃತ ದೇಹವನ್ನು ಹನೂರು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಗಾರದಲ್ಲಿ ಇರಿಸಲಾಗಿದೆ ಅಲ್ಲದೆ ಆಸ್ಪತ್ರೆ ಬಳಿ ಶಾಸಕ ಮಂಜುನಾಥ್ ಆಗಮಸಿ ಕುಟುಂಬಸ್ಥರಿಗೆ ಧೈರ್ಯ ತುಂಬುವ ಕೆಲಸಕ್ಕೆ ಮುಂದಾದರು