ಮಂಡ್ಯ: ಕೈ ನಾಯಕರು ಸುಳ್ಳು ಭರವಸೆ ಕೊಟ್ಟು ಜನರನ್ನು ಜನರಿಗೆ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ, ಪಾಂಡವಪುರ ತಾಲೂಕಿನ ಸುಂಕಾತೊಣ್ಣೂರು ಗ್ರಾಮದ ಮೋಹನ್ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಕಾರ್ಯಕರ್ತ.
ಸರ್ಕಾರದ ಗೃಹ ಜ್ಯೋತಿ ಯೋಜನೆ ವಿರುದ್ದ ಸಿಡಿದೆದ್ದಿದ್ದು, ಪಕ್ಷದ ನಾಯಕರಾದ ಸಿದ್ದರಾಮಯ್ಯ, ಡಿಕೆಶಿಗೆ ವಿಡಿಯೋದಲ್ಲಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾನೆ.
ತರಾಟೆಗೆ ತೆಗೆದುಕೊಂಡಿರುವ ಕೈ ಕಾರ್ಯಕರ್ತನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.