ಮೈಸೂರು: ದಸರಾ ಉತ್ಸವ ಮತ್ತು ಜಂಬೂ ಸವಾರಿಯಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗ್ಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ಸುತ್ತೂರು ಮಠಾಧೀಶ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರನ್ನು ಶಾಲು ಹೊದೆಸಿ ಸನ್ಮಾನಿಸಿ ನೆನಪಿನ ಕಾಣಿಕೆ ರೂಪದಲ್ಲಿ ಗಂಧದ ಕಟ್ಟಿಗೆಯಲ್ಲಿ ಕೆತ್ತಿದ ದೇವರ ವಿಗ್ರಹವನ್ನು ನೀಡಿದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹಾದೇವಪ್ಪ ಕಾಂಗ್ರೆಸ್ ಶಾಸಕ ತನ್ವೀರ್ ಸೇಟ್ ಇದ್ದರು.