ಮಂಡ್ಯ: ಜಿಲ್ಲೆಯಲ್ಲಿ ಕಾವೇರಿ ಹೋರಾಟ ತೀವ್ರಗೊಂಡಿದ್ದು, ಮಂಡ್ಯದ ಸಂಜಯ್ ವೃತ್ತದಲ್ಲಿ ಬೆಂ-ಮೈ ಹೆದ್ದಾರಿ ತಡೆದು ಮಾನವಸರಪಳಿ ಮಾಡುವ ಪ್ರತಿಭಟನೆ ನಡೆಸಿದರು.
ತಮಿಳುನಾಡಿಗೆ ನೀರು ಬಿಟ್ಟ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮಾನವಸರಪಳಿ ನಿರ್ಮಿಸಿ ರಾಜ್ಯ ಸರ್ಕಾರಕ್ಕೆ ಕಪ್ಪು ಬಾವುಟ ಪ್ರದರ್ಶನ ಮಾಡುವ ಮೂಲಕ ಕರಾಳ ದಿನ ಆಚರಣೆ ನಡೆಸಲಾಯಿತು.

ಮಾಜಿ ಎಂಎಲ್ ಸಿ ಕೆ.ಟಿ.ಶ್ರೀಕಂಠೇಗೌಡ ರಿಂದ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಧರಣಿ ಸ್ಥಳಕ್ಕೆ ಮೆರವಣಿಗೆ ತಲುಪಿದ್ದು, ಧರಣಿ ಕುಳಿತು ಕಾವೇರಿಗಾಗಿ ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಧರಣಿಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಭಾಗಿಯಾಗಿವೆ.
ಹೆದ್ದಾರಿ ತಡೆಯಿಂದ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.