Sunday, April 20, 2025
Google search engine

Homeರಾಜಕೀಯವಿವಿಧ ಪಕ್ಷಗಳ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ವಿವಿಧ ಪಕ್ಷಗಳ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು: ಕುಮಾರಣ್ಣ ಮೈತ್ರಿ ಕರ್ನಾಟಕಕ್ಕೆ ಮಾತ್ರ ಎನ್ನುತ್ತಿದ್ದಾರೆ. ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಕೇರಳಕ್ಕೆ ಒಂದು ಭಾಗ, ಕರ್ನಾಟಕಕ್ಕೆ ಒಂದು ಭಾಗ ಎಂದು ಹೇಗೆ ಮಾಡುತ್ತಾರೋ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದರು. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ವಿವಿಧ ಪಕ್ಷಗಳ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೆಡಿಎಸ್ ಎನ್‌ಡಿಎಗೆ ಸೇರಿದ ಕಾರಣ, ಕೇರಳ ಸೇರಿದಂತೆ ಇತರೆ ರಾಜ್ಯಗಳ ಜೆಡಿಎಸ್ ಪಕ್ಷದ ನೂರಾರು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಅದರಲ್ಲೂ ಇಂಡಿಯಾ ಮೈತ್ರಿಕೂಟಕ್ಕೆ ಸೇರುತ್ತಿದ್ದಾರೆ ಎಂದರು.

ಕಳೆದ ವರ್ಷ ಇದೇ ಹೊತ್ತಿನಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರೊಂದಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದೆವು.ಈ ದೇಶದ ಪ್ರಧಾನಿ ಮೋದಿಯವರು ಗ್ಯಾರಂಟಿ ಯೋಜನೆಯಿಂದ ರಾಜ್ಯ ದಿವಾಳಿಯಾಗುತ್ತದೆ ಎಂದರು. ಆದರೆ ಈಗ ಐದು ಗ್ಯಾರಂಟಿಗಳ ಬಗ್ಗೆ ಎಲ್ಲರೂ ವ್ಯಾಖ್ಯಾನ ಮಾಡುತ್ತಿದ್ದಾರೆ ಎಂದು ಹೇಳಿದರು.

ಜೆಡಿಎಸ್ ಪಕ್ಷದ ಸಾವಿರಾರು ಕಾರ್ಯಕರ್ತರನ್ನು ಪಕ್ಷಕ್ಕೆ ಬರ ಮಾಡಿಕೊಳ್ಳಲು ಮೈಸೂರಿನಿಂದ ಓಡೋಡಿ ಬಂದೆ. ಮುಖ್ಯಮಂತ್ರಿಗಳು ಸಹ ಈ ಕಾರ್ಯಕ್ರಮಕ್ಕೆ ಬರಬೇಕಾಗಿತ್ತು, ಕೊನೆ ಕ್ಷಣದಲ್ಲಿ ಬೇರೆ ಕಾರ್ಯಕ್ರಮ ನಿಗದಿಯಾದ ಕಾರಣ ಬರಲಾಗಲಿಲ್ಲ. ಈ ನಾಡಿನ ಜನತೆಯೇ ನಮ್ಮ ದೇವರುಗಳು. ಕಾಲನ ಓಟದಲ್ಲಿ ಯಾವುದೂ ಶಾಶ್ವತವಲ್ಲ, ಬಿಜೆಪಿ- ಜೆಡಿಎಸ್ ಗೆಳೆಯರಿಗೆ ಈ ಮಾತನ್ನು ಹೇಳುತ್ತಿದ್ದೇನೆ. ಜನರ ಸೇವೆಯೇ ಜನಾರ್ದನ ಸೇವೆ ಎಂದು ನಾವೆಲ್ಲಾ ಕೆಲಸ ಮಾಡಬೇಕಿದೆ. ಪಕ್ಕಕ್ಕೆ ಸೇರುವವರೆಲ್ಲಾ ಹಳೆಯದನ್ನೆಲ್ಲಾ ಮರೆತು ಪಕ್ಷಕ್ಕೆ ದುಡಿಯಬೇಕು ಎಂದು ತಿಳಿಸಿದರು.

ಮಾಜಿ ಮೇಯರ್ ನಾಗರಾಜ್, ಮಾಜಿ ಉಪ ಮೇಯರ್ ಪಾಲಾಕ್ಷ, ರಾಜಣ್ಣ, ಮಾಜಿ ನಗರ ಸಭಾ ಸದಸ್ಯರಾದ ಉಮಾನ ಸೇರಿದಂತೆ ಸಾವಿರಾರು ಕಾರ್ಯಕರ್ತರು ಜೆಡಿಎಸ್ ಮತ್ತು ಬಿಜೆಪಿ ಪಕ್ಷ ತೊರೆದು ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ಇದಕ್ಕೂ ಮುನ್ನ ಶಿವಮೊಗ್ಗ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಹಾಗೂ ರಾಜ್ಯ ವಕ್ತಾರ ಎಂ. ಶ್ರೀಕಾಂತ್ ಸೇರಿದಂತೆ ಹಲವು ಮುಖಂಡರುಗಳನ್ನು ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರ ಮಾಡಿಕೊಂಡರು.

RELATED ARTICLES
- Advertisment -
Google search engine

Most Popular