Saturday, April 19, 2025
Google search engine

Homeರಾಜ್ಯಸುದ್ದಿಜಾಲಸಾರ್ವಜನಿಕರ ಸೇವೆಗೆ ಜಿಲ್ಲಾಡಳಿತ ಬದ್ದ: ಡಾ.ಕುಮಾರ

ಸಾರ್ವಜನಿಕರ ಸೇವೆಗೆ ಜಿಲ್ಲಾಡಳಿತ ಬದ್ದ: ಡಾ.ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಸಾರ್ವಜನಿಕ ಹವಾಲುಗಳನ್ನು ತಾಲ್ಲೂಕು ಮಟ್ಟದಲ್ಲಿಯೇ ಪರಿಹರಿಸಲು ಜಿಲ್ಲಾಡಾಳಿತ ಬದ್ದ ಎಂದು ಜಿಲ್ಲಾಧಿಕಾರಿ ಡಾ.ಕುಮಾರರವರು ತಿಳಿಸಿದ್ದರು. ಅವರು ಇಂದು ಮಂಡ್ಯ ತಾಲ್ಲೂಕು ಕಚೇರಿ ಆವರಣದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿ ವಾರದಲ್ಲಿ ಒಂದು ದಿನ ಒಂದು ತಾಲ್ಲೂಕಿಗೆ ಭೇಟಿ ನೀಡಿ. ಅಲ್ಲಿನ ಸಾರ್ವಜನಿಕರ ಸಮಸ್ಯೆಗಳನ್ನು ಅರಿತು ಅದಕ್ಕೆ ಪ್ರತಿಯಾಗಿ ಸ್ಥಳದಲ್ಲಿಯೇ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಮಾಲೋಚಿಸಿ ಸ್ಥಳದಲ್ಲಿಯೇ ಸೂಕ್ತ ಪರಿಹಾರ ನೀಡಲಾಗುವುದು. ಒಂದು ವೇಳೆ ಸ್ಥಳದಲ್ಲಿಯೇ ಪರಿಹರಿಸಲು ಸಾಧ್ಯವಾಗದಿದ್ದರೆ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಿ ಮುಂದಿನ ಹಂತಕ್ಕೆ ಅಹವಾಲುಗಳನ್ನು ಕಳುಹಿಸಿಕೊಡಲಾಗುವುದು ಎಂದರು. ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳು ಸಾರ್ವಜನಿಕರಿಂದ ಹೆಚ್ಚಾಗಿ ಕೇಳಿ ಬರುವುದರಿಂದ ಈಗಾಗಲೇ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸಲಹೆ – ಸೂಚನೆಗಳನ್ನು ನೀಡಲಾಗಿದೆ.

ಅದಕ್ಕೆ ಸಂಬಂಧಿಸಿದಂತೆ ಗ್ರಾಮ ಮಟ್ಟದಲ್ಲಿಯೇ ಪೌತಿ ಖಾತೆ ಆಂದೋಲನವನ್ನು ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಪೌತಿ ಖಾತೆ ಕೆಲಸಗಳು ಇನ್ನು ಬೇಗನೆ ನಡೆಯಲಿವೆ ಎಂದರು . ಇಂದು ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ೧೪೦ ಅರ್ಜಿಗಳನ್ನು ಸ್ವೀಕರಿಸಲಾಯಿತು. ಇದೇ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ (ಆಡಳಿತ) ಎಂ ಬಾಬು, ಆನಂದ್ ಕುಮಾರ್, ತಾಲೂಕು ತಹಶೀಲ್ದಾರ್ ಶಿವಕುಮಾರ್ ಬಿರಾದಾರ್, ನಗರಸಭೆ ಪೌರಯುಕ್ತರಾದ ಮಂಜುನಾಥ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular