Saturday, April 19, 2025
Google search engine

Homeಅಪರಾಧತುಮಕೂರು: ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರ ಬಂಧನ

ತುಮಕೂರು: ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರ ಬಂಧನ

ತುಮಕೂರು: ರಾಜ್ಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಪ್ರಕರಣ ಸದ್ದು ಮಾಡುತ್ತಿರುವ ಬೆನ್ನಲ್ಲೇ ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರನ್ನು ಅರಣ್ಯಾಧಿಕಾರಿಗಳು ಬಂಧಿಸಿರುವ ಘಟನೆ ತುಮಕೂರಿನ ಮಾರನಾಯಕನಪಾಳ್ಯದಲ್ಲಿ ನಡೆದಿದೆ.

ಬಿಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್ ಬಂಧಿತರಾಗಿದ್ದು, ಓರಿಸ್ಸಾ ಮೂಲದವರಾಗಿದ್ದಾರೆ.

ಬಂಧಿತರು ಮಾರನಾಯಕನಪಾಳ್ಯದ ಇಟ್ಟಿಗೆ ಪ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಹಲವು ದಿನಗಳಿಂದ ನವಿಲುಗಳನ್ನ ಕೊಂದು ಭಕ್ಷಿಸುತ್ತಿದ್ದರು.

ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದು,  ಈ ವೇಳೆ 1.5 ಕೆ.ಜಿ ನವಿಲಿನ ಹಸಿ ಮಾಂಸ, ನವಿಲಿನ ಎರಡು ಕಾಲುಗಳು, ಬೇಯಿಸಿದ ಮಾಂಸ, ನವಿಲು ಹಿಡಿಯಲು ಬಳಸಿದ್ದ ಬಲೆಗಳು, ಉರುಳುಗಳು, ಮಾಂಸ ಬೇಯಿಸಿದ್ದ ಪಾತ್ರೆಗಳನ್ನು ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆದ ಮಾಂಸವನ್ನು ಎಫ್ ಎಸ್ ಎಲ್ ಗೆ ಅಧಿಕಾರಿಗಳು ಕಳುಹಿಸಲಿದ್ದಾರೆ.

ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular