Saturday, April 19, 2025
Google search engine

Homeಅಪರಾಧವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ಆರೋಪ: ಜೋಡಿಚಿಕ್ಕೇನಹಳ್ಳಿ ಸರ್ಕಾರಿ ಶಾಲೆ ಮುಖ್ಯಶಿಕ್ಷಕ ಅಮಾನತು

ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ಆರೋಪ: ಜೋಡಿಚಿಕ್ಕೇನಹಳ್ಳಿ ಸರ್ಕಾರಿ ಶಾಲೆ ಮುಖ್ಯಶಿಕ್ಷಕ ಅಮಾನತು

ಚಿತ್ರದುರ್ಗ: ವಿದ್ಯಾರ್ಥಿನಿ ಮೇಲೆ ಮುಖ್ಯ ಶಿಕ್ಷಕ ಆ್ಯಸಿಡ್ ದಾಳಿ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೋಡಿಚಿಕ್ಕೇನಹಳ್ಳಿ ಸರ್ಕಾರಿ ಶಾಲೆ ಮುಖ್ಯಶಿಕ್ಷಕ ರಂಗಸ್ವಾಮಿ ಅಮಾನತುಗೊಳಿಸಿ ಡಿಡಿಪಿಐ ರವಿಶಂಕರರೆಡ್ಡಿ ಆದೇಶ ಹೊರಡಿಸಿದ್ದಾರೆ.

ಚಿತ್ರದುರ್ಗ ತಾಲೂಕಿನ ಜೋಡಿಚಿಕ್ಕೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರಂಗಸ್ವಾಮಿ ಅವರು ಶೌಚಾಲಯ ತೊಳೆಯಲು ಬಳಸುವ ಆ್ಯಸಿಡ್ ಅನ್ನು ವಿದ್ಯಾರ್ಥಿನಿ ಮೇಲೆ ಎರಚಿದ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಮುಖ್ಯಶಿಕ್ಷಕನ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಘಟನೆ ಹಿನ್ನೆಲೆ

ಅ.25ರಂದು ದಸರಾ ರಜೆ ಮುಗಿಸಿ ಮಕ್ಕಳು ಚಿತ್ರದುರ್ಗ ತಾಲೂಕಿನ ಜೋಡಿಚಿಕ್ಕೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬಂದಿದ್ದರು. ಶಾಲೆಗೆ ಬಂದ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯ ಶಿಕ್ಷಕ ರಂಗಸ್ವಾಮಿ ವಿದ್ಯಾರ್ಥಿಗಳಿಗೆ ಶೌಚಾಲಯ ತೊಳೆಯಲು ಸೂಚಿಸಿದ್ದರಂತೆ. ಅದೇ ವೇಳೆ ಎರಡನೇ ತರಗತಿ ವಿದ್ಯಾರ್ಥಿನಿ ಸಿಂಚನಾ(8) ನೋಡಲೆಂದು ಅಲ್ಲಿಗೆ ತೆರಳಿದ್ದಾಳೆ. ಆಗ ಕೋಪಗೊಂಡ ಮುಖ್ಯ ಶಿಕ್ಷಕ ರಂಗಸ್ವಾಮಿ ಶೌಚಾಲಯ ತೊಳೆಯಲು ಇರಿಸಿದ್ದ ಆಸಿಡ್ ತೆಗೆದುಕೊಂಡು ಎರಚಿದ್ದರು. ಈ ಪರಿಣಾಮ ಸಿಂಚನಾಳ ಬೆನ್ನಿಗೆ ಗಾಯವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗಾಯಾಳು ಬಾಲಕಿಯ ತಾಯಿ ಪವಿತ್ರಾ ಆಗ್ರಹಿಸಿದ್ದರು. ಅದರಂತೆಯೇ ಈಗ ಮುಖ್ಯಶಿಕ್ಷಕ ರಂಗಸ್ವಾಮಿ ಅಮಾನತುಗೊಳಿಸಿ DDPI ರವಿಶಂಕರರೆಡ್ಡಿ ಆದೇಶ ಹೊರಡಿಸಿದ್ದಾರೆ.

ಇನ್ನು ಗಾಯಾಳು ಸಿಂಚನಾಳನ್ನು ಮುಖ್ಯ ಶಿಕ್ಷಕ ರಂಗಸ್ವಾಮಿಯೇ ಜಿಲ್ಲಾಸ್ಪತ್ರೆಗೆ ಕರೆ ತಂದು ಚಿಕಿತ್ಸೆ ಕೊಡಿಸಿದ್ದರು.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಶಿಕ್ಷಕ ರಂಗಸ್ವಾಮಿ, ಕೆಲ ಹಿರಿಯ ವಿದ್ಯಾರ್ಥಿಗಳೊಂದಿಗೆ ಶಾಲೆ ಸ್ವಚ್ಚಗೊಳಿಸಲಾಯಿತು. ಶೌಚಾಲಯ ಸ್ವಚ್ಛತೆಗಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದೆವು. ಆಗ ಸಿಂಚನಾ ಅಲ್ಲಿಗೆ ಬಂದಿದ್ದಳು. ನೀನು ಹೋಗಮ್ಮ ಎನ್ನುವಷ್ಟರಲ್ಲಿ ಪಾಕೆಟ್ ಕಟ್ ಮಾಡಿದ ಪುಡಿ ಸಿಂಚನಾಳ ಮೇಲೆ ಬಿದ್ದಿತು. ಯಾವುದೇ ದುರುದ್ದೇಶದಿಂದ ಎರಚಿಲ್ಲ ಎಂದು ತಿಳಿಸಿದ್ದರು.

RELATED ARTICLES
- Advertisment -
Google search engine

Most Popular