Monday, April 21, 2025
Google search engine

Homeಸ್ಥಳೀಯಮೈಸೂರು ದಸರಾ ದೀಪಾಲಂಕಾರ ಅವಧಿ ವಿಸ್ತರಣೆ

ಮೈಸೂರು ದಸರಾ ದೀಪಾಲಂಕಾರ ಅವಧಿ ವಿಸ್ತರಣೆ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದೀಪಾಲಂಕಾರ ಅವಧಿಯನ್ನು ನ.೪ ರವರೆಗೆ ವಿಸ್ತರಿಸಲಾಗಿದೆ. ಅ. ೨೫ ರಿಂದ ನ. ೪ ರವರೆಗೆ ಪ್ರತಿದಿನ ಸಂಜೆ ೪ ರಿಂದ ರಾತ್ರಿ ೧೧ ಗಂಟೆಯವರೆಗೆ ನಗರದಲ್ಲಿ ವಾಹನ ಸಂಚಾರದಟ್ಟನೆ ಅಧಿಕವಾಗುವುದರಿಂದ, ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಕೆಲವು ರಸ್ತೆಗಳಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಮತ್ತು ವಾಹನ ವ್ಯವಸ್ಥೆಯಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ.

ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತ (ಗನ್ ಹೌಸ್)-ಕುಸ್ತಿ ಅಖಾಡ ಜಂಕ್ಷನ್-ಬಿ.ಎನ್.ರಸ್ತೆ-ಜಯಚಾಮರಾಜ ಒಡೆಯರ್ ವೃತ್ತ (ಹಾರ್ಡಿಂಜ್ ವೃತ್ತ)- ಆಲ್ಬರ್ಟ್ ವಿಕ್ಟರ್ ರಸ್ತೆ- ಚಾಮರಾಜ ಒಡೆಯರ್ ವೃತ್ತ (ಓಲ್ಡ್ ಸ್ಟಾಚ್ಯು ವೃತ್ತ)-ಕೆ.ಆರ್.ವೃತ್ತ ನ್ಯೂ ಸಯ್ಯಾಜಿರಾವ್ ರಸ್ತೆ ಕಾರ್ಪೋರೇಷನ್ ವೃತ್ತ- ಬಸವೇಶ್ವರ ವೃತ್ತ- ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತ (ಗನ್ ಹೌಸ್), (ಪುರಂದರ ರಸ್ತೆಯನ್ನು ಒಳಗೊಂಡಂತೆ) ಈ ರಸ್ತೆಗಳಲ್ಲಿ ಅರಮನೆಯನ್ನು ಮಧ್ಯ ಬಿಂದುವನ್ನಾಗಿ ಪರಿಗಣಿಸಿ ಗಡಿಯಾರದ ಮುಳ್ಳು ಸುತ್ತುವ ದಿಕ್ಕಿಗೆ ವಿರುದ್ಧ ದಿಕ್ಕಿನಲ್ಲಿ ವಾಹನಗಳು ಸಂಚರಿಸಲು ಅವಕಾಶ ನೀಡಿರುತ್ತದೆ. ಈ ರಸ್ತೆಗಳಲ್ಲಿ ಗಡಿಯಾರದ ಮುಳ್ಳು ಸುತ್ತುವ ದಿಕ್ಕಿನಲ್ಲಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಕೆ.ಆರ್.ವೃತ-ಆಯುರ್ವೇದಿಕ್ ವೃತ-ನೆಹರು ವೃತ್ತ ಚಾಮರಾಜ ಒಡೆಯರ್ ವೃತ್ತ (ಓಲ್ ಸ್ಟ್ಯಾಚ್ಯು ವೃತ್ತ)- ಕೆ.ಆರ್.ವೃತ್ತ: ಕೆ.ಆರ್.ವೃತ್ತ-ನ್ಯೂ ಸಯ್ಯಾಜಿರಾವ್ ರಸ್ತೆ- ಬಾಬಾ ಜಂಕ್ಷನ್ -ಆಯುರ್ವೇದಿಕ್ ವೃತ್ತ-ಇರ್‍ವಿನ್ ರಸ್ತೆ, ನೆಹರು ವೃತ್ತ ಅಶೋಕ ರಸ್ತೆ – ಮಹಾವೀರ ವೃತ್ತ (ದೊಡ್ಡ ಗಡಿಯಾರ)ಚಾಮರಾಜ ಒಡೆಯರ್ ವೃತ್ತ (ಓಲ್ಡ್ ಸ್ಟಾಚ್ಯು ವೃತ್ತ)- ಕೆ.ಆರ್.ವೃತ್ತ ಈ ರಸ್ತೆಗಳ ಮಧ್ಯ ಇರುವ ಪ್ರದೇಶವನ್ನು ಮಧ್ಯ ಬಿಂದುವನ್ನಾಗಿ ಪರಿಗಣಿಸಿ ಗಡಿಯಾರದ ಮುಳ್ಳು ಸುತ್ತುವ ದಿಕ್ಕಿಗೆ ವಾಹನಗಳು ಸಂಚರಿಸಲು ಅವಕಾಶ ನೀಡಲಾಗಿದೆ. ಗಡಿಯಾರದ ಮುಳ್ಳು ಸುತ್ತುವ ವಿರುದ್ಧ ದಿಕ್ಕಿನಲ್ಲಿ ವಾಹನಗಳು ಸಂಚರಿಸದಂತೆ ನಿರ್ಬಂಧಿಸಲಾಗಿದೆ.

ಎನ್.ಮಾಧವರಾವ್‌ವೃತ್ತ (ಅಗ್ರಹಾರ ವೃತ್ತ) ದಿಂದ ಉತ್ತರಕ್ಕೆ ತ್ಯಾಗರಾಜ ರಸ್ತೆಯಲ್ಲಿ ಚಾಮರಾಜ ಜೋಡಿ ರಸ್ತೆಯವರೆಗೆ ವಾಹನಗಳ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಚಾಮರಾಜ ಜೋಡಿ ರಸ್ತೆಯಿಂದ ತ್ಯಾಗರಾಜ ರಸ್ತೆಯಲ್ಲಿ ಎನ್.ಮಾಧವರಾವ್ ವೃತ್ತ (ಅಗ್ರಹಾರ ವೃತ್ತ) ದವರೆಗೆ ದಕ್ಷಿಣಕ್ಕೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಸರ್ಕಸ್ ಮೈದಾನದ ಜಂಕ್ಷನ್‌ನಿಂದ ಪೂರ್ವದಿಂದ ಪಶ್ಚಿಮಕ್ಕೆ ಜಯಚಾಮರಾಜ ಒಡೆಯರ್ ವೃತ್ತದ (ಹಾರ್ಡಿಂಜ್ ವೃತ್ತ) ವರೆಗೆ ವಾಹನಗಳ ಏಕಮುಖ ಸಂಚಾರಕ್ಕೆ ಅವಕಾಶ ನೀಡಿರುತ್ತದೆ. ಎಸ್.ಅಂಗಣ್ಣ ವೃತ್ತದಿಂದ (ಚಿರಾಗ್ ಜಂಕ್ಷನ್) ಪೂರ್ವಕ್ಕೆ ಸರ್ಕಸ್ ಮೈದಾನದವರೆಗೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಚಂದ್ರಗುಪ್ತ ರಸ್ತೆಯಲ್ಲಿ ಬಿ.ಎನ್.ರಸ್ತೆ ಜಂಕ್ಷನ್‌ನಿಂದ ಅಶೋಕ ರಸ್ತೆ ಜಂಕ್ಷನ್‌ವರೆಗೆ ಏಕಮುಖ ಸಂಚಾರ ವ್ಯವಸ್ಥೆ ಜಾರಿಯಲ್ಲಿದ್ದು, ನ.೪ರವರೆಗೆ ಏಕಮುಖ ಸಂಚಾರ ವ್ಯವಸ್ಥೆಯನ್ನು ತಾತ್ಕಲಿಕವಾಗಿ ರದ್ದುಗೊಳಿಸಿ, ಅಶೋಕ ರಸ್ತೆಯಿಂದ ಬಿ.ಎನ್.ರಸ್ತೆ ಜಂಕ್ಷನ್‌ವರೆಗೆ ಪಶ್ಚಿಮದಿಂದ ಪೂರ್ವ ದಿಕ್ಕಿಗೆ ಏಕಮುಖ ಸಂಚಾರ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.

ಅಶೋಕ ರಸ್ತೆಯಲ್ಲಿ ದಾವೂದ್‌ಖಾನ್ ರಸ್ತೆ ಜಂಕ್ಷನ್ (ಗಾಂಧಿ ಮೆಡಿಕಲ್ಸ್) ಇಂದ ನೆಹರು ಸರ್ಕಲ್‌ವರೆಗೆ ದಕ್ಷಿಣಕ್ಕೆ ವಾಹನಗಳ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. – ಅಶೋಕ ರಸ್ತೆಯಲ್ಲಿ ನೆಹರು ಸರ್ಕಲ್‌ನಿಂದ ದಾವೂದ್‌ಖಾನ್ ರಸ್ತೆ ಜಂಕ್ಷನ್‌ವರೆಗೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಬನುಮಯ್ಯ ರಸ್ತೆಯಲ್ಲಿ ಚಾಮರಾಜ ಜೋಡಿ ರಸ್ತೆ ಜಂಕ್ಷನ್‌ನಿಂದ ಬನುಮಯ್ಯ ಚೌಕದವರೆಗೆ ಚಾಮರಾಜ ಜೋಡಿ ರಸ್ತೆಯಿಂದ ಬನುಮಯ್ಯ ಚೌಕದವರೆಗೆ ಉತ್ತರಕ್ಕೆ ವಾಹನಗಳ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಬನುಮಯ್ಯ ಚೌಕದಿಂದ ಚಾಮರಾಜ ಜೋಡಿ ರಸ್ತೆ ವರೆಗೆ ಉತ್ತರದಿಂದ ದಕ್ಷಿಣಕ್ಕೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಇಟ್ಟಿಗೆ ಗೂಡಿನ ೫ನೇ ಕ್ರಾಸ್ ರಸ್ತೆಯಲ್ಲಿ ಮೃಗಾಲಯದ ರಸ್ತೆ ಜಂಕ್ಷನ್‌ನಿಂದ ವಸ್ತು ಪ್ರದರ್ಶನ ಮೈದಾನದ ಪೂರ್ವ ದ್ವಾರದವರೆಗೆ ರಸ್ತೆಯ ಎರಡೂ ಬದಿಗಳಲ್ಲಿ, ಮಾನಸ ರಸ್ತೆಯಲ್ಲಿ ಎಂ.ಜಿ.ರಸ್ತೆ ಜಂಕ್ಷನ್‌ನಿಂದ ಲೋಕರಂಜನ್ ರಸ್ತೆ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ, ಮಲೆಮಹದೇಶ್ವರ ರಸ್ತೆಯಲ್ಲಿ ಬಿ.ಎನ್.ರಸ್ತೆ ಜಂಕ್ಷನ್‌ನಿಂದ (ಛತ್ರಿ ಮರ) ಪೂರ್ವಕ್ಕೆ ಚನ್ನಯ್ಯ ವೃತ್ತದವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular