ಮಂಡ್ಯ: ಇಂದು ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಬುಗತಗಹಳ್ಳಿ ಗ್ರಾಮದಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಮಾಡಿದ್ದಾರೆ.
ಬುಗತಗಹಳ್ಳಿ ಗ್ರಾಮಸ್ಥರು ಹಾಗೂ ಶ್ರೀ ವಾಲ್ಮೀಕಿ ಯುವಕರ ಸಂಘದಿಂದ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಸಲ್ಲಿಸಿ, ಜಯಂತಿ ಆಚರಿಸಲಾಗಿದೆ.
ಬಳಿಕ ಅನ್ನ ಸಂತರ್ಪಣೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದ್ದಾರೆ.
ಇದೇ ವೇಳೆ ಗ್ರಾಮದ ಯುವಕರು ಮನು ಕುಮಾರ್, ಶಿವು ,ದರ್ಶನ್ ನಾಯಕ ಸೇರಿ ಗ್ರಾಮಸ್ಥರು ಭಾಗಿಯಾಗಿದ್ದಾರೆ.