Tuesday, April 22, 2025
Google search engine

Homeರಾಜ್ಯಸುದ್ದಿಜಾಲಮಹರ್ಷಿ ವಾಲ್ಮೀಕಿ ರಚಿತ ರಾಮಾಯಣ ಇಂದಿಗೂ ಪ್ರಸ್ತುತ: ಸಚಿವ ಮಧು ಬಂಗಾರಪ್ಪ

ಮಹರ್ಷಿ ವಾಲ್ಮೀಕಿ ರಚಿತ ರಾಮಾಯಣ ಇಂದಿಗೂ ಪ್ರಸ್ತುತ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಮಹರ್ಷಿ ವಾಲ್ಮೀಕಿಯವರು ದೂರದೃಷ್ಟಿ ಉಳ್ಳವರಾಗಿದ್ದು ಅವರು ರಚಿಸಿರುವ ಮಹಾಕಾವ್ಯ ರಾಮಾಯಣ ಇಂದಿಗೂ ಪ್ರಸ್ತುತವಾಗಿದೆ ಎಂದು ಶಾಲಾ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರಪಾಲಿಕೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾವೆಲ್ಲರೂ ರಾಮನನ್ನು ಸ್ಮರಿಸುತ್ತೇವೆ. ಕೇವಲ ರಾಮ ರಾಮ ಎಂದರೆ ಸಾಲದು ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ರಾಮನ ಆದರ್ಶಗಳು, ಸೀತೆಯ ತಾಳ್ಮೆ, ಭರತನ ನಂಬಿಕೆ-ವಿಶ್ವಾಸ, ಹನುಮಂತನ ಭಕ್ತಿ ಹೀಗೆ ಒಂದೊಂದು ಉತ್ತಮ ಅಂಶಗಳನ್ನು ನಾವು ಅಳವಡಿಸಿಕೊಳ್ಳಬೇಕು.

ಕುಲ ಕಸುಬು ಬೇಟೆಯಾದರೂ ವಾಲ್ಮೀಕಿಯವರು ಸರ್ವಶ್ರೇಷ್ಟವಾದ ಮಹಾಕಾವ್ಯ ರಾಮಾಯಣ ರಚಿಸಿದ್ದಾರೆ. ಇಂತಹ ಪುಣ್ಯ ವ್ಯಕ್ತಿಯನ್ನು ನಾವು ಹೊಂದಿರುವುದು ನಮ್ಮ ಭಾಗ್ಯ. ರಾಷ್ಟ್ರಕವಿ ಕುವೆಂಪು ರವರು ಸಹ ವಾಲ್ಮೀಕಿಯವರಿಂದ ಸ್ಪೂರ್ತಿ ಪಡೆದಿದ್ದಾರೆ. ಅನೇಕ ಕವಿಗಳು ಅವರಿಂದ ಸ್ಪೂರ್ತಿ ಪಡೆದು ಕಾವ್ಯ ರಚಿಸಿದ್ದಾರೆ.

ರಾಮಾಯಣ ಇಂದಿಗೆ ಅತ್ಯಂತ ಪ್ರಸ್ತುತವಾಗಿದೆ. ಅಲ್ಲಿ ನಾವು ಕಾಣುವ ತಾಳ್ಮೆ, ಭ್ರಾತೃತ್ವ, ಗೌರವ, ನಂಬಿಕೆ, ವಿಶ್ವಾಸ, ಭಕ್ತಿ ಹೀಗೆ ಎಲ್ಲ ಅಂಶಗಳು ನಮಗೆ ಬೇಕು. ಆ ಎಲ್ಲ ಅಂಶಗಳನ್ನು ನಾವು ಅಳವಡಿಸಿಕೊಂಡು ಸೌಹಾರ್ಧತೆ ಮತ್ತು ಶಾಂತಿಯಿಂದ ಬಾಳೋಣ. ಹೆತ್ತ ತಂದೆ-ತಾಯಿಯನ್ನು ಗೌರವದಿಂದ ನಡೆಸಿಕೊಂಡು ಪೂಜಿಸೋಣ ಎಂದು ಹೇಳಿದರು.

ನವೆಂಬರ್ 8 ರಂದು ನಗರದ ಸೈನ್ಸ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದ್ದು, ಉದ್ಯೋಗಾಕಾಂಕ್ಷಿಗಳು, ಯುವಜನತೆ ಈ ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಇದರ ಪ್ರಯೋಜನ ಪಡೆಯಬೇಕು. ಹಾಗೂ ಜನರ ಮನೆ ಬಾಗಿಲಿಗೆ ಬಂದು ಅಹವಾಲು ಸ್ವೀಕರಿಸುವ ಜನತಾ ದರ್ಶನವನ್ನು ಅಧಿಕಾರಿಗಳು ಕ್ಷೇತ್ರವಾರು ನಡೆಸಲಿದ್ದು, ಸಾರ್ವಜನಿಕರು ಇದರ ಉಪಯೋಗ ಪಡೆಯಬೇಕು.

-ಎಸ್.ಮಧು ಬಂಗಾರಪ, ಜಿಲ್ಲಾ ಉಸ್ತುವಾರಿ ಸಚಿವರು

RELATED ARTICLES
- Advertisment -
Google search engine

Most Popular