Tuesday, April 22, 2025
Google search engine

Homeಸ್ಥಳೀಯಎಂ.ಲಕ್ಷ್ಮಣ್ ಅವರಿಗೆ ಕುಮಾರಸ್ವಾಮಿ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ಪೊಲೀಸ್ ಆಯುಕ್ತರಿಗೆ ದೂರು

ಎಂ.ಲಕ್ಷ್ಮಣ್ ಅವರಿಗೆ ಕುಮಾರಸ್ವಾಮಿ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ಪೊಲೀಸ್ ಆಯುಕ್ತರಿಗೆ ದೂರು

ಮೈಸೂರು: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬೆಂಬಲಿಗರು ದೂರವಾಣಿ ಮೂಲಕ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದ್ದು, ಈ ಸಂಬಂಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹಾಗೂ ಜಿಲ್ಲಾ ನಗರ ಕಾಂಗ್ರೆಸ್ ಸಮಿತಿ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಕೆ ಮಾಡಿದೆ.

ಅ.೨೬ ಮತ್ತು೨೭ ರಂದು ಪತ್ರಿಕಾಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿಎಚ್.ಡಿ.ಕುಮಾರಸ್ವಾಮಿ ಅವರ ಆಧಾರ ರಹಿತ ಆರೋಪಕ್ಕೆ ಸ್ಪಷ್ಟೀಕರಣ ನೀಡಿದ್ದರಿಂದ,ಕುಮಾರಸ್ವಾಮಿ ರವರ ಅಭಿಮಾನಿಗಳು ಮತ್ತು ಜೆಡಿಎಸ್ ಕಾರ್ಯಕರ್ತರು ನಿರಂತರವಾಗಿ ಕೆಪಿಸಿಸಿ ವಕ್ತಾರನಾದ ನನಗೆ ಬೆದರಿಕೆಗಳನ್ನು ಹಾಕುತ್ತಿದ್ದಾರೆ.ಹಾಗೂ ನಮ್ಮ ಮನೆಗೆ ಮುತ್ತಿಗೆ ಹಾಕಲು ಮತ್ತು ಒಂಟಿಯಾಗಿದ್ದಾಗ ನನ್ನನ್ನು ಅಟ್ಯಾಕ್ ಮಾಡಲು ಅ. ೨೮ ರ ಶನಿವಾರ ಬೆಳಿಗ್ಗೆ ಕೆಲವರು ಕಲಾಮಂದಿರದ ಮುಂದೆ ಮಾತನಾಡಿಕೊಳ್ಳುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಆದ್ದರಿಂದ ಬೆದರಿಕೆ ಹಾಕಿರುವವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರಿಗೆ ದೂರು ನೀಡಿದ್ದಾರೆ.

ಈ ವೇಳೆ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ವಕ್ತಾರ ಮಹೇಶ್, ಕಾಂಗ್ರೆಸ್ ಮುಖಂಡರುಗಳಾದ ಹೆಡತಲೆ ಮಂಜುನಾಥ್, ಕಾರ್ಯದರ್ಶಿ ಶಿವಣ್ಣ, ಕಾಂಗ್ರೆಸ್ ಮುಖಂಡ ಬಿ.ಎಂ.ರಾಮು, ಮಾಧ್ಯಮ ಎನ್.ಆರ್.ನಾಗೇಶ್, ಉತ್ತನಹಳ್ಳಿ ಶಿವಣ್ಣ ಇದ್ದರು.

RELATED ARTICLES
- Advertisment -
Google search engine

Most Popular