ತುಮಕೂರು : ಸೋಶಿಯಲ್ ಮೀಡಿಯಾದಲ್ಲಿ ಅವಾಚ್ಯ ಶಬ್ದಗಳನ್ನು ಬಳಸಿ ಪೋಸ್ಟ್ ಮಾಡಿದ ವಿಚಾರವಾಗಿ ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು, ತುಮಕೂರಿನ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅವಾಚ್ಯ ಶಬ್ದ ಬಳಸಿ ಕೆಪಿಸಿಸಿ ವಕ್ತಾರ ಸೂರ್ಯ ಮುಕುಂದರಾಜ್ ಹಾಗೂ ಅವರ ಸಹೋದ್ಯೋಗಿಗಳ ವಿರುದ್ಧ ವಾಗ್ದಾಳಿ ಮಾಡಿ ಫೇಕ್ ಅಕೌಂಟ್ ಗಳ ಮೂಲಕ ಕಮೆಂಟ್ ಮಾಡಿದ ಹಿನ್ನೆಲೆ, ತೇಜಸ್ ಗೌಡ ಎಂಬುವವರಿಂದ ದೂರು ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 1860(u/s 504) ಅಡಿಯಲ್ಲಿ ದೂರು ದಾಖಲಾಗಿದ್ದು ಇಡೀ ವಕೀಲ ಕುಲಕ್ಕೆ ಅವಮಾನ ಮಾಡಿದ್ದಾರೆ ಎಂಬ ಆರೋಪ ಮಾಡಲಾಗಿದೆ. ಜೊತೆಗೆ ಇವರ ಫೇಸ್ಬುಕ್ ಖಾತೆಯನ್ನು ನಿರ್ಬಂಧಿಸುವಂತೆ ದೂರು ದಾಖಲಾಗಿದ್ದು, ನ್ಯಾಯಾಲಯದ ಆದೇಶದಂತೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
