Saturday, April 19, 2025
Google search engine

Homeರಾಜ್ಯಸುದ್ದಿಜಾಲನೇರಳಕುಪ್ಪೆ ಸರ್ಕಾರಿ ಪ್ರೌಢಶಾಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ನೇರಳಕುಪ್ಪೆ ಸರ್ಕಾರಿ ಪ್ರೌಢಶಾಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಹನಗೋಡು: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಅವರ ತತ್ವ, ಆದರ್ಶ ಹಾಗೂ ಜೀವನ ಶೈಲಿಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಮುಖ್ಯ ಶಿಕ್ಷಕ ಕುಮಾರಸ್ವಾಮಿ ಸಲಹೆ ನೀಡಿದರು.

ಹನಗೋಡು ಹೋಬಳಿಯ ನೇರಳಕುಪ್ಪೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಅಯೋಜಿಸಿದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿ, ಮಹರ್ಷಿ ವಾಲ್ಮೀಕಿ ಯವರು ಭಾರತ ದೇಶ ಕಂಡ ಶ್ರೇಷ್ಠ ಕವಿಗಳಲ್ಲಿ ಒಬ್ಬರಾಗಿದ್ದು, ಇವರು ಹಿಂದೂ ಧರ್ಮದ ಪ್ರಮುಖ ಗ್ರಂಥಗಳಲ್ಲಿ ಒಂದಾದ ರಾಮಾಯಣ ಮಹಾಕಾವ್ಯವನ್ನು ನೀಡಿದ ಆದಿ ಕವಿಯಾಗಿದ್ದು, ಇವರ ಕಾವ್ಯವು ಭಗವಾನ್ ವಿಷ್ಣುವಿನ ಎಂಟು ಅವತಾರಗಳ ಕಥೆಯನ್ನು ಹೇಳುತ್ತದೆ. ಆದ್ದರಿಂದ ಇಂತಹ ಮಹನೀಯರನ್ನು ಒಂದೇ ಸಮಾಜಕ್ಕೆ ಮೀಸಲಿಡದೇ ಎಲ್ಲರು ಇಂತಹ ಮಹಾನ್ ಪುರುಷರ ತತ್ವ, ಆದರ್ಶ, ಜೀವನ ಶೈಲಿಗಳನ್ನು ಮೈಗೂಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಮಹೇಶ್, ಶಿಕ್ಷಕರಾದ ಪ್ರೀತಿ, ಉಮಾ, ಲಕ್ಷ್ಮಣ ಸೇರಿದಂತೆ ಶಾಲಾಭಿವೃದ್ದಿ ಸಮಿತಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular