Monday, April 21, 2025
Google search engine

Homeಸಿನಿಮಾಪುನೀತ್​ ರಾಜ್​ಕುಮಾರ್​ 2ನೇ ವರ್ಷದ ಪುಣ್ಯಸ್ಮರಣೆ: ಅಪ್ಪು ಸಮಾಧಿಗೆ ವಿಶೇಷ ಪೂಜೆ

ಪುನೀತ್​ ರಾಜ್​ಕುಮಾರ್​ 2ನೇ ವರ್ಷದ ಪುಣ್ಯಸ್ಮರಣೆ: ಅಪ್ಪು ಸಮಾಧಿಗೆ ವಿಶೇಷ ಪೂಜೆ

ಬೆಂಗಳೂರು: ನಟ ಪುನೀತ್​ ರಾಜ್​ಕುಮಾರ್ ಅವರು ಭೌತಿಕವಾಗಿಲ್ಲ. ಅವರು ಇಲ್ಲವಾಗಿ ಇಂದಿಗೆ (ಅಕ್ಟೋಬರ್​ 29) ಎರಡು ವರ್ಷ ಕಳೆದಿದೆ. ಅಭಿಮಾನಿಗಳ ಹೃದಯದಲ್ಲಿ ಅವರಿಗೆ ಶಾಶ್ವತವಾದ ಸ್ಥಾನ ಸಿಕ್ಕಿದೆ. 2ನೇ ವರ್ಷದ ಪುಣ್ಯಸ್ಮರಣೆ  ಪ್ರಯುಕ್ತ ಅಪ್ಪು ಸ್ಮಾರಕವನ್ನು ವಿಶೇಷವಾಗಿ ಅಲಂಕರಿಸಲಾಗಿದೆ. ಬೆಳ್ಳಂಬೆಳಗ್ಗೆಯೇ ಅಪಾರ ಸಂಖ್ಯೆಯ ಅಭಿಮಾನಿಗಳು ಸಮಾಧಿ  ಬಳಿ ಜಮಾಯಿಸಿದ್ದಾರೆ. ಪುನೀತ್ ರಾಜ್​ಕುಮಾರ್​ ಭಾವಚಿತ್ರಕ್ಕೆ ನಮಿಸುತ್ತಿದ್ದಾರೆ. ಡಾ. ರಾಜ್​ಕುಮಾರ್​ ಕುಟುಂಬದ ಸದಸ್ಯರಿಂದ ಅಪ್ಪು ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ನಗುಮೊಗದ ಒಡೆಯನ ೨ನೇ ವರ್ಷದ ಪುಣ್ಯಸ್ಮರಣೆ ಕಂಠೀರ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿಯಲ್ಲಿ ನಡೆಯಿತು. ರಾಘವೇಂದ್ರ ರಾಜ್ ಕುಮಾರ್ ಕುಟುಂಬ, ಅಶ್ವಿನಿ ಪುನೀತ್ ರಾಜ್‌ಕುಮಾರ್ ಹಾಗೂ ಕಿರಿಯ ಪುತ್ರಿ ವಂದಿತಾ, ಅಕ್ಕಂದಿರಾದ ಲಕ್ಷ್ಮೀ, ಪೂರ್ಣಿಮಾ ಮತ್ತು ವಿನಯ್ ರಾಜ್‌ಕುಮಾರ್, ಯುವ ರಾಜ್‌ಕುಮಾರ್ ಸೇರಿದಂತೆ ಬಂಧು ಮಿತ್ರರು ಆಗಮಿಸಿ ಪೂಜೆ ಸಲ್ಲಿಸಿದರು.

ಅಪ್ಪುಗೆ ಇಷ್ಟವಾದ ಬಿರಿಯಾನಿ, ಡ್ರೈ ಜಾಮೂನ್, ಚಿಕನ್ ಕೂರ್ಮಾ, ಮೊಸರನ್ನ, ಉದ್ದಿನ ವಡೆ ಸೇರಿದಂತೆ ಕೆಲ ಸಿಹಿ ತಿನಿಸುಗಳನ್ನಿಟ್ಟು ಪೂಜೆ ನೆರವೇರಿಸಲಾಯಿತು. ದೂರದ ಊರುಗಳಿಂದ ಬಂದ ಅಭಿಮಾನಿಗಳು ಸರದಿ ಸಾಲಿನಲ್ಲಿ ನಿಂತು ನಮನ ಸಲ್ಲಿಸುತ್ತಿದ್ದಾರೆ. ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಲಾಗುತ್ತಿದೆ. ಪುನೀತ್​ ರಾಜ್​ಕುಮಾರ್​ ಅವರ ಸಿನಿಮಾ ಮತ್ತು ಸಾಮಾಜಿಕ ಕೆಲಸಗಳನ್ನು ಅಭಿಮಾನಿಗಳು ಸ್ಮರಿಸಿಕೊಳ್ಳುತ್ತಿದ್ದಾರೆ.

RELATED ARTICLES
- Advertisment -
Google search engine

Most Popular