Monday, April 21, 2025
Google search engine

Homeಅಪರಾಧಕಾಡಾನೆಗಳ ತುಳಿತದಿಂದ ರೈತನ ಕಾಲು ಮುರಿತ

ಕಾಡಾನೆಗಳ ತುಳಿತದಿಂದ ರೈತನ ಕಾಲು ಮುರಿತ

ಮೈಸೂರು: ಜಮೀನಿಗೆ ನುಗ್ಗಿದ ಕಾಡಾನೆಗಳ ತುಳಿತಕ್ಕೆ ಒಳಗಾದ ರೈತನ ಕಾಲು ಅರ್ಧಕ್ಕೆ ಮುರಿದಿರುವ ಘಟನೆ ನಂಜನಗೂಡು ತಾಲೂಕಿನ ಆಕಳ ಗ್ರಾಮದಲ್ಲಿ ನಡೆದಿದೆ. ಶೆಟ್ಟಹಳ್ಳಿ ಗ್ರಾಮದ ಬೋಳಯ್ಯ ಎಂಬ ರೈತ(೬೫)ಆನೆಯ ತುಳಿತಕ್ಕೆ ಒಳಗಾದವರು.

ರೈತ ಬೋಳಯ್ಯ ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆಗಳ ಹಿಂಡು ಜಮೀನಿಗೆ ನುಗ್ಗಿ ದಾಂಧಲೆ ಮಾಡಿವೆ. ರೈತನು ದೂರಿನಿಂದ ಬೆದರಿಸಲು ಹೋಗಿದ್ದ ವೇಳೆ ಕಾಡಾನೆಗಳು ಎರಗಿ ಬಂದಿವೆ. ಈ ವೇಳೆ ರೈತ ಕೆಳಗಡೆ ಬಿದ್ದಿದ್ದಾನೆ. ಕಾಡಾನೆಯೊಂದು ರೈತನ ಕಾಲನ್ನು ತುಳಿದ ಪರಿಣಾಮ ರೈತನ ಬಲಗಾಲು ಅರ್ಧಕ್ಕೆ ಮುರಿದಿದೆ. ಈ ಸಂದರ್ಭದಲ್ಲಿ ಅಕ್ಕಪಕ್ಕದ ಜಮೀನಿನ ರೈತರು ಬಂದು ಕಾಡಾನೆಗಳನ್ನು ಓಡಿಸಿದ್ದಾರೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು, ಹುಲ್ಲಹಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈತರ ಮೇಲೆ ಆಗಿಂದಾಗ್ಗೆ ಕಾಡಾನೆಗಳು ದಾಳಿ ಮಾಡುತ್ತಿದ್ದು, ಇವುಗಳ ಹಾವಳಿ ತಡೆಗೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು.

ಆನೆಗಳ ದಾಳಿಗೆ ಸಂಬಂಧಿಸಿದಂತೆ ಗ್ರಾಮಸ್ಥರ ಮತ್ತು ಅರಣ್ಯಾಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಕಾಲು ಕಳೆದುಕೊಂಡ ರೈತನ ಕುಟುಂಬಕ್ಕೆ ಪರಿಹಾರವನ್ನು ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಅರಣ್ಯ ಇಲಾಖೆಯಿಂದ ಸೂಕ್ತ ಪರಿಹಾರ ನೀಡುತ್ತೇವೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular