Monday, April 21, 2025
Google search engine

Homeರಾಜಕೀಯಕೇರಳದಲ್ಲಿ ಬಾಂಬ್ ಬ್ಲಾಸ್ಟ್: ಕರ್ನಾಟಕದಲ್ಲಿ ಕಟ್ಟೆಚ್ಚರ, ಸಚಿವ ಪರಮೇಶ್ವರ್

ಕೇರಳದಲ್ಲಿ ಬಾಂಬ್ ಬ್ಲಾಸ್ಟ್: ಕರ್ನಾಟಕದಲ್ಲಿ ಕಟ್ಟೆಚ್ಚರ, ಸಚಿವ ಪರಮೇಶ್ವರ್

ಉಡುಪಿ: ಕೇರಳದ ಎರ್ನಾಕುಲಂ ಜಿಲ್ಲೆಯ ಸಮಾವೇಶ ಕೇಂದ್ರವೊಂದರಲ್ಲಿ ಇಂದು ಭಾನುವಾರ ಸಂಭವಿಸಿದ ಭಾರೀ ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು, ೩೭ ಮಂದಿ ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿ ಪೊಲೀಸರಿಗೆ ಶರಣಾಗಿದ್ದಾನೆ. ಸದ್ಯ ಈ ಕುರಿತಾಗಿ ಉಡುಪಿಯಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದು, ಕರಾವಳಿ ಭಾಗ ಮತ್ತು ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೂಕ್ಷ್ಮವಾಗಿ ಗಮನ ಇರಿಸಲಾಗಿದೆ. ಕರ್ನಾಟಕದಲ್ಲಿ ಇಂತಹ ಘಟನೆ ನಡೆಯಲು ಬಿಡಲ್ಲ ಎಂದಿದ್ದಾರೆ.

ತೀವ್ರ ನಿಗಾ ಇರಿಸುವಂತೆ ಗುಪ್ತಚರ ಇಲಾಖೆಗೆ ಸೂಚಿಸಲಾಗಿದೆ. ಕೆಲ ಸಂಘಟನೆ ಸಕ್ರಿಯ ಆಗಬಹುದು ಅಥವಾ ಆಗದೇ ಇರಬಹುದು. ಎಲ್ಲ ಎಸ್‌ಪಿಗಳಿಗೆ ಸೂಚನೆ ನೀಡಲಾಗಿದೆ. ವ್ಯಕ್ತಿ ಹಾಗೂ ಸಂಘಟನೆ ಮೇಲೆ ಅನುಮಾನ ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಮತ್ತೊಮ್ಮೆ ಆಪರೇಷನ್ ಕಮಲ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತದೆ ಎಂದು ಬಿಜೆಪಿ ಐದು ವರ್ಷ ಕಾದುಕೊಂಡಿರಲಿ ಎಂದು ರಾಜ್ಯದ ಜನರೇ ತೀರ್ಮಾನಿಸಿದ್ದಾರೆ. ಸರಕಾರದ ಅಧಿಕಾರ ಹಂಚಿಕೆ ಎರಡುವರೆ ವರ್ಷ, ಒಂದು ಕಾಲು ವರ್ಷ ಎಂದು ಮಾಧ್ಯಮಗಳು ಹೇಳುತ್ತವೆ. ನಮ್ಮಲ್ಲಿ ಯಾವುದೇ ಚರ್ಚೆ ಇಲ್ಲ ಎಂದರು.

RELATED ARTICLES
- Advertisment -
Google search engine

Most Popular