Monday, April 21, 2025
Google search engine

Homeಅಪರಾಧಕೇರಳದಲ್ಲಿ ಸರಣಿ ಸ್ಫೋಟ ಪ್ರಕರಣ: ಗಾಯಗೊಂಡಿದ್ದ 12 ವರ್ಷದ ಬಾಲಕಿ ಸಾವು

ಕೇರಳದಲ್ಲಿ ಸರಣಿ ಸ್ಫೋಟ ಪ್ರಕರಣ: ಗಾಯಗೊಂಡಿದ್ದ 12 ವರ್ಷದ ಬಾಲಕಿ ಸಾವು

ಕೊಚ್ಚಿ: ಕೇರಳದಲ್ಲಿ ಸಂಭವಿಸಿದ ಸರಣಿ ಸ್ಪೋಟದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 12 ವರ್ಷದ ಬಾಲಕಿಯೊಬ್ಬಳು ಸೋಮವಾರ ಮೃತಪಟ್ಟಿದ್ದಾಳೆ.

ಇದರಿಂದ ಕೇರಳ ಸರಣಿ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 3 ಕ್ಕೆ ಏರಿಕೆಯಾಗಿದೆ.

ಎರ್ನಾಕುಲಂನ ಕಲಮಸ್ಸೆರಿಯಲ್ಲಿ ಭಾನುವಾರ ಕ್ರಿಶ್ಚಿಯನ್ ಸಮುದಾಯದ ಪ್ರಾರ್ಥನಾ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಸರಣಿ ಸ್ಫೋಟ ಸಂಭವಿಸಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಕೇರಳದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅದರಲ್ಲಿ ಇಬ್ಬರು ಭಾನುವಾರ ಮೃತಪಟ್ಟರೆ ಹನ್ನೆರಡು ವರ್ಷದ ಬಾಲಕಿ ಸೋಮವಾರ ಮುಂಜಾನೆ ಮೃತಪಟ್ಟಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ತಿಳಿಸಿದೆ.

ಕೇರಳದ ಎರ್ನಾಕುಲಂನಲ್ಲಿ ನಡೆದ ಸರಣಿ ಸ್ಫೋಟ ಪ್ರಕರಣದ ತನಿಖೆಯನ್ನು 20 ಸದಸ್ಯರ ತಂಡ ನಡೆಸಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭಾನುವಾರ ಹೇಳಿದ್ದಾರೆ.

ಪ್ರಕರಣದ ಕುರಿತು ಎಫ್‌ ಐಆರ್ ಕೂಡ ದಾಖಲಾಗಿದೆ.

RELATED ARTICLES
- Advertisment -
Google search engine

Most Popular