ಬೆಂಗಳೂರು: ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ್ದ ಬೆಂಕಿ ದುರಂತ ಮಾಸುವ ಮುನ್ನವೇ ಬೆಂಗಳೂರಿನ ವೀರಭದ್ರ ನಗರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಬೆಂಕಿಯ ಕೆನ್ನಾಲಿಗೆಗೆ ಹಲವು ಖಾಸಗಿ ಬಸ್ ಗಳು ಹೊತ್ತಿ ಉರಿದಿದ್ದು, ಸ್ಥಳಕ್ಕೆ ಎರಡು ಅಗ್ನಿ ಶಾಮಕದಳ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿವೆ.
50ಕ್ಕೂ ಹೆಚ್ಚು ಬಸ್ ಗಳನ್ನು ಘಟನಾ ಸ್ಥಳದಲ್ಲಿ ನಿಲ್ಲಿಸಲಾಗಿತ್ತು. ಘಟನೆಗೆ ಕಾರಣ ತಿಳಿದುಬಂದಿಲ್ಲ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.