Monday, April 21, 2025
Google search engine

Homeರಾಜ್ಯಸುದ್ದಿಜಾಲಕರ್ನಾಟಕ ಎಂದು ನಾಮಕರಣ ೫೦ ವರ್ಷ ಪೂರ್ಣ : ವಿಶೇಷ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಕರ್ನಾಟಕ ಎಂದು ನಾಮಕರಣ ೫೦ ವರ್ಷ ಪೂರ್ಣ : ವಿಶೇಷ ಆಚರಣೆಗೆ ಜಿಲ್ಲಾಧಿಕಾರಿ ಕರೆ

ರಾಮನಗರ: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ ೫೦ ವಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದ್ದು ಅದರ ಅಂಗವಾಗಿ ನಾಳೆ ನವೆಂಬರ್ ೧ ರಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ನಾಳೆ ನ. ೧ ರಂದು ಜಿಲ್ಲೆಯಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ- ೫೦ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಘೋಷ ವಾಕ್ಯವನ್ನು ಬರೆಯುವಂತೆ ನಾಗರಿಕರಲ್ಲಿ ಮನವಿ ಮಾಡಲಾಗಿದೆ.
ನ, ೧ ರ ಬೆಳಗ್ಗೆ ೯ ಗಂಟೆಗೆಎಲ್ಲಾಆಕಾಶವಾಣಿ ಕೇಂದ್ರಗಳಲ್ಲಿ (ರೇಡಿಯೋ) ನಾಡಗೀತೆಯನ್ನು ಪ್ರಸಾರ ಮಾಡಲಾಗುವುದು.ಆ ಸಮಯದಲ್ಲಿ ಕನ್ನಡ ನಾಡಿನ ಸಮಸ್ತ ನಾಗರಿಕರು ಎದ್ದು ನಿಂತು ರಾಷ್ಟ್ರಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡಗೀತೆಗೂ ಗೌರವ ಸಲ್ಲಿಸಲು ಮನವಿ ಮಾಡಿದೆ.

ನಾಳೆ ನ. ೧ ರ ಸಂಜೆ ೫ ಗಂಟೆಗೆ ಜಿಲ್ಲೆಯ ಎಲ್ಲಾ ಗ್ರಾಮಗಳ ಮೈದಾನಗಳಲ್ಲಿ ಕೆಂಪು ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವ ಆಚರಿಸಬೇಕು. ನವೆಂಬರ್ ೧ರ ಸಂಜೆ ೭ ಗಂಟೆಗೆ ಜಿಲ್ಲೆಯಲ್ಲಿ ಎಲ್ಲಾ ಮನೆಗಳ ಮುಂದೆ, ಕಚೇರಿಗಳ ಮುಂದೆ ಹಾಗೂ ಅಂಗಡಿ-ಮಳಿಗೆಗಳ ಮುಂದೆ ಹಣತೆ (ದೀಪ) ಹಚ್ಚುವ ಮೂಲಕ ಕನ್ನಡಜ್ಯೋತಿ ಬೆಳಗುವಂತೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳಿಗೆ ಕೋರಲಾಗಿದೆ.

RELATED ARTICLES
- Advertisment -
Google search engine

Most Popular