Saturday, April 19, 2025
Google search engine

Homeಸ್ಥಳೀಯಅದ್ದೂರಿಯಾಗಿ 68 ನೆ ಕನ್ನಡ ರಾಜ್ಯೋತ್ಸವ ಆಚರಣೆ: ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

ಅದ್ದೂರಿಯಾಗಿ 68 ನೆ ಕನ್ನಡ ರಾಜ್ಯೋತ್ಸವ ಆಚರಣೆ: ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

ಮೈಸೂರು: ಅದ್ದೂರಿಯಾಗಿ 68 ನೆ ಕನ್ನಡ ರಾಜ್ಯೋತ್ಸವ  ಕಾರ್ಯಕ್ರಮವನ್ನು ಆಚರಿಸಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್. ಸಿ ಮಹದೇವಪ್ಪ ಅವರು ಧ್ವಜಾರೋಹಣ ನೆರವೇರಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ನಗರದ ವೋವೆಲ್ ಮೈದಾನದಲ್ಲಿ 68 ನೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಚಿವರು ಹಾಗೂ ಗಣ್ಯರು ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ನೆರವೇರಿಸಿದರು.

ಸಚಿವರು ತೆರೆದ ವಾಹನದಲ್ಲಿ ತುಕಡಿಗಳ ಪರಿವೀಕ್ಷಣೆ ಮಾಡಿದರು. ಪೆರೇಡ್ ನಲ್ಲಿ 18 ತಂಡಗಳು ಭಾಗವಹಿಸಿದ್ದವು. ಆಕರ್ಷಕ ಪಥ ಸಂಚಲನ ನಡೆಯಿತು.

ಮಾನ್ಯ ಸಚಿವರು 68 ನೆ ಕನ್ನಡ ರಾಜ್ಯೋತ್ಸವದ ಶುಭ ಸಂದೇಶವನ್ನು ನೀಡಿದರು. ಕನ್ನಡದ ಬಳಕೆ ಹಾಗೂ ಕನ್ನಡದ ಬೆಳವಣಿಗೆಗೆ ಸರ್ಕಾರ ನೀಡಿರುವ ಸೌಲಭ್ಯಗಳ ಮಾಹಿತಿ ನೀಡಿದರು. ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷಗಳು ಆಗಿರುವ ಹಿನ್ನೆಲೆ ನವೆಂಬರ್ 01, 2024 ರವರಿಗೆ ಕನ್ನಡದ ಬೆಳವಣಿಗೆ, ಅಭಿವೃದ್ಧಿಗೆ ಸಂಬಂಧಿಸಿದ ಕನ್ನಡ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಹುಯಿಲಗೋಳ ನಾರಾಯಣರಾಯರು ರಚಿಸಿರುವ ಉದಯವಾಗಲಿ ಚೆಲುವ ಕನ್ನಡನಾಡು,  ರಾಷ್ಟ್ರಕವಿ ಕುವೆಂಪು ಅವರ ಗೀತೆ ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು, ಒಂದೇ ಒಂದೇ ಕರ್ನಾಟಕ ಒಂದೇ, ಸಿದ್ದಯ್ಯ ಪುರಾಣಿಕ ಅವರ ಹೊತ್ತಿತು ಹೊತ್ತಿತು ಕನ್ನಡದ ದೀಪ, ಚೆನ್ನವೀರ ಕಣವಿ ಅವರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಗೀತೆಗಳನ್ನು ಕಲಾವಿದರಿಂದ ಪ್ರಸ್ತುತಪಡಿಸಲಾಯಿತು. ಜಿಲ್ಲಾ ಮಟ್ಟದ  ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದಿರುವ 50 ಸಾಧಕರು ಹಾಗೂ ರಾಜಶ್ರೀ  ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರಶಸ್ತಿ ಪಡೆದ 17 ಸಾಧಕರಿಗೆ  ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಚಾಮರಾಜ ವಿಧಾನಸಭಾ ಶಾಸಕರಾದ ಕೆ.ಹರೀಶ್‌ಗೌಡ , ಮೈಸೂರು ಮಹಾನಗರ ಪಾಲಿಕೆ ಮಹಾಪೌರರಾದ ಶಿವಕುಮಾರ್ ಭಾಗವಹಿಸುವರು.ವಿಧಾನಸಭಾ ಶಾಸಕರಾದ ತನ್ವೀರ್ ಸೇಟ್, ಜಿ.ಟಿ ದೇವೇಗೌಡ, ಶ್ರೀವತ್ಸ,  ವಿಧಾನ ಪರಿಷತ್ ಶಾಸಕರಾದ ಮರಿತಿಬ್ಬೇಗೌಡ, ಎಚ್.ವಿಶ್ವನಾಥ್, ಸಿ.ಎನ್ ಮಂಜೇಗೌಡ, ಮೈಸೂರು ಮಹಾನಗರ ಪಾಲಿಕೆ ಉಪ ಮಹಾಪೌರರಾದ ಡಾ.ಜಿ ರೂಪ , ಜಿಲ್ಲಾಧಿಕಾರಿಗಳಾದ ಡಾ ಕೆ‌.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular