Monday, April 21, 2025
Google search engine

Homeರಾಜ್ಯಹಿರಿಯ ಗಾಂಧಿವಾದಿ ಕೆ.ಟಿ.ಚಂದು ಅವರಿಗೆ ಅಭಿನಂದನೆ

ಹಿರಿಯ ಗಾಂಧಿವಾದಿ ಕೆ.ಟಿ.ಚಂದು ಅವರಿಗೆ ಅಭಿನಂದನೆ

ಮದ್ದೂರು: ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಹಿರಿಯ ಗಾಂಧಿವಾದಿ ಕೆ.ಟಿ.ಚಂದು ಅವರನ್ನು ಎಂ.ಎಚ್.ಚನ್ನೇಗೌಡ ವಿದ್ಯಾಸಂಸ್ಥೆಯ ವತಿಯಿಂದ ಬುಧವಾರ ಅಭಿನಂದಿಸಲಾಯಿತು.

ಸಂಸ್ಥೆಯ ಅಧ್ಯಕ್ಷ ಸ್ವರೂಪ್ಚಂದ್ ಮಾತನಾಡಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕೆ.ಟಿ.ಚಂದು ಅವರು ಗ್ರಾಮಾಂತರ ಪ್ರದೇಶದ ವಿದ್ಯಾಥರ್ಿಗಳಿಗೆ ಅನುಕೂಲವಾಗಿ ಎಂಬ ಉದ್ದೇಶದಿಂದ ಹಲವಾರು ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿ ಲಕ್ಷಾಂತರ ವಿದ್ಯಾಥರ್ಿಗಳ ಬಾಳಿಗೆ ಬೆಳಕಾಗಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಕೆ.ಟಿ.ಚಂದು ಅವರು ಕೇವಲ ಶಿಕ್ಷಣ ಕ್ಷೇತ್ರದಲ್ಲಿ ಮಾತ್ರವಲ್ಲದೆ, ಸಹಕಾರ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಸಮಾಜ ಸೇವೆ, ಸಂಘಟನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮದೆಯದ ಮಹತ್ತರವಾದ ಕೊಡುಗೆ ನೀಡಿದ್ದಾರೆ. ಇಂತಹ ಹಿರಿಯ ಚೇತನಕ್ಕೆ ಸಕರ್ಾರ ರಾಜ್ಯ ಪ್ರಶಸ್ತಿ ಕೊಡುತ್ತಿರುವುದು ಅತೀವ ಸಂತೋಷ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಸ್ಥೆಯ ಕಾರ್ಯದರ್ಶಿ ಅಪೂರ್ವ ಚಂದ್ರ. ಸಿ.ಪ್ರಾಶುಂಪಾಲ ಯು.ಎಸ್.ಶಿವಕುಮಾರ್, ಉಪನ್ಯಾಸಕರಾದ ಪ್ರೇಮಕುಮಾರಿ, ಪಂಚಲಿಂಗೇಗೌಡ, ರೇವಣ್ಣ, ಸುರೇಂದ್ರ, ಜಯವರ್ಧನ್, ನಂದಿನಿ ನವೀನ್ ಇದ್ದರು.

RELATED ARTICLES
- Advertisment -
Google search engine

Most Popular