Monday, April 21, 2025
Google search engine

Homeರಾಜ್ಯಪ್ರಶಸ್ತಿ ಪುರಸ್ಕೃತ ಸಾಧಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಶಸ್ತಿ ಪುರಸ್ಕೃತ ಸಾಧಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ೬೮ನೇ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಈ ಬಾರಿ ರಾಜ್ಯದ ವಿವಿಧೆಡೆಯ ೬೮ ಸಾಧಕರಿಗೆ, ಸಂಘ ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದೆ. ಇಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದ್ದು, ಅದಕ್ಕೂ ಮುನ್ನ ಪ್ರತಿ ವರ್ಷದಂತೆ ಈ ಬಾರಿಯೂ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಸಾಧಕರಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಚಹಾ ಕೂಟ ಏರ್ಪಡಿಸಲಾಯಿತು. ಪ್ರಶಸ್ತಿ ಪುರಸ್ಕೃತರನ್ನು ಬಸ್‌ಗಳಲ್ಲಿ ಚಹಾಕೂಟ ಏರ್ಪಡಿಸಿದ್ದ ವಿಧಾನಸೌಧಕ್ಕೆ ಕರೆತರಲಾಯಿತು.

೬೮ ನೇ ಕರ್ನಾಟಕ ರಾಜ್ಯೋತ್ಸವದ ಸಂಭ್ರಮದ ಪ್ರಯುಕ್ತ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯೋತ್ಸವ ಪ್ರಶಸ್ತಿ ಪಡೆದ ಸಾಧಕರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಇತರ ಗಣ್ಯರಿಗೆ ಚಹಾ ಕೂಟ ಆಯೋಜಿಸಿದ್ದರು. ಈ ಸಂತೋಷ ಕೂಟದಲ್ಲಿ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ. ಹೆಚ್. ಮುನಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಇತರ ಗಣ್ಯರು ಭಾಗವಹಿಸಿದರು.

ಈ ಬಾರಿ ೬೮ನೇ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸುತ್ತಿದ್ದು, ಮೈಸೂರು ರಾಜ್ಯ ಎಂದು ಇದ್ದ ರಾಜ್ಯಕ್ಕೆ ಕರ್ನಾಟಕ ಎನ್ನುವ ಹೆಸರು ನಾಮಕರಣಗೊಂಡು ಇವತ್ತಿಗೆ ೫೦ ವರ್ಷಗಳಾಗಿವೆ. ಆ ಹಿನ್ನೆಲೆ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವವನ್ನೂ ಆಚರಿಸಲಾಗುತ್ತಿದೆ. ಆ ಹಿನ್ನೆಲೆ ಈ ಬಾರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ೬೮ ಸಾಧಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಿತ್ತು.

RELATED ARTICLES
- Advertisment -
Google search engine

Most Popular