ರಾಯಚೂರು: ದಲಿತ ಮುಖಂಡನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಾನ್ವಿ ಪೊಲೀಸರು ಬಂಧಿಸಿದ್ದಾರೆ.
ಕೇಶವ, ರಾಮು, ದೇವರೆಡ್ಡಿ ಬಂಧಿತ ಆರೋಪಿಗಳು. ವಿಚಾರಣೆ ವೇಳೆ, ಮೃತ ಪ್ರಸಾದ್ ಈ ಹಿಂದೆ ನಮಗೆ ಕಿರುಕುಳ ನೀಡಿದ್ದನು. ಈ ಹಿನ್ನೆಲೆಯಲ್ಲಿ ಕೊಲೆ ಮಾಡಿರುವುದಾಗಿ ಆರೋಪಿಗಳು ಬಾಯಿಬಿಟ್ಟಿದ್ದಾರೆ.
ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಮಾರ್ಗದರ್ಶನದಲ್ಲಿ ತನಿಖೆ ನಡೆದಿದೆ.
ಅಕ್ಟೋಬರ್ 30 ರಂದು ಮಾನ್ವಿ ತಾಲ್ಲೂಕಿನ ಮದ್ಲಾಪುರದ ಕಾಲುವೆ ಬಳಿ ದಲಿತ ಮುಖಂಡ ಪ್ರಸಾದ್ (40) ಎಂಬುವರನ್ನು ಕೊಲೆ ಮಾಡಲಾಗಿತ್ತು.
ಮಾನ್ವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.