ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಹಲವೆಡೆ ಬಿಲ್ಡರ್ಸ್ ಮನೆಗಳ ಮೇಲೆ ಐಟಿ ದಾಳಿಯಾಗಿದೆ.
ಕಳೆದ ಹಲವು ದಿನಗಳಿಂದ ರಾಜ್ಯದ ಹಲವೆಡೆ ಜ್ಯುವೆಲರ್ ಅಂಗಡಿಗಳ ಮೇಲೆ ದಾಳಿ ಮಾಡಿದ್ದ ಐಟಿ ಅಧಿಕಾರಿಗಳು, ಈ ಬಾರಿ ಬಿಲ್ಡರ್ಸ್ ಗೆ ಶಾಕ್ ಕೊಟ್ಟಿದ್ದಾರೆ.
ಕಳೆದ ಹಲವು ದಿನಗಳಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಐಟಿ ದಾಳಿಯಾಗುತ್ತಲೇ ಇದೆ. ಮೊನ್ನೇ ಅಷ್ಟೇ ಉಡುಪಿ ಹಾಗೂ ಮಂಗಳೂರು ಭಾಗದಲ್ಲಿ ಚಿನ್ನಾಭರಣ ಅಂಗಡಿಗಳ ಮೇಲೆ ಐಡಿ ಅಧಿಕಾರಿಗಳು ದಾಳಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.