ಬೆಂಗಳೂರು: ಜೀವನ್ ಭೀಮಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ತಿಪ್ಪಸಂದ್ರದಲ್ಲಿ ಅನಧಿಕೃತವಾಗಿ ಪಟಾಕಿ ಮಾರಾಟ ಮಾಡುತ್ತಿದ್ದ ಗೋದಾಮು ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ನ್ಯೂ ತಿಪ್ಪಸಂದ್ರ ಮುಖ್ಯರಸ್ತೆಯ ಧಹಿಯಾ ಎಂಬ ಮಾರ್ಟ್‌ನಲ್ಲಿ ಗೋದಾಮಿನಲ್ಲಿ ಪರವಾನಗಿ ಪಡೆದುಕೊಳ್ಳದೇ ಅನಧಿಕೃತವಾಗಿ ಪಟಾಕಿ ಮಾರಾಟ ಮಾಡಲಾಗುತಿತ್ತು.
ಯಾವುದೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳದೇ ಪಟಾಕಿ ಮಾರಾಟ ನಡೆಸುತ್ತಿರುವ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ, ಇಬ್ಬರನ್ನು ವಶಕ್ಕೆ ಪಡೆದು ಒಟ್ಟು ೧.೨೫ ಲಕ್ಷ ರೂಪಾಯಿ ಮೌಲ್ಯದ ಪಟಾಕಿ ಸೀಜ್ ಮಾಡಲಾಗಿದೆ. ಆರೋಪಿಗಳ ವಿರುದ್ಧ ಜೀವನ್ ಭೀಮಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಮತ್ತೊಂದು ಗೋದಾಮಿನ ಮೇಲೆ ದಾಳಿ ನಡೆಸಿದ್ದು, ಪರವಾನಗಿ ಪಡೆಯದೇ ಜನವಸತಿ ಪ್ರದೇಶದಲ್ಲಿ ಪಟಾಕಿ ಮಾರಾಟ ಮಾಡಲಾಗುತಿತ್ತು. ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳದೇ ಅಕ್ರಮವಾಗಿ ಪಟಾಕಿ ದಾಸ್ತಾನು ಮಾಡಲಾಗಿತ್ತು. ಮಾಹಿತಿ ಮೇರೆಗೆ ಗೋಡೌನ್ ಮೇಲೆ ದಾಳಿ ನಡೆಸಿದ್ದ ಸಿಸಿಬಿ ನಡೆಸಿ ವ್ಯಕ್ತಿಯೊಬ್ಬನನ್ನು ಬಂಧಿಸಿ ೧೫ ಲಕ್ಷ ಮೌಲ್ಯದ ಪಟಾಕಿ ಸೀಜ್ ಮಾಡಲಾಗಿದೆ.