Saturday, April 19, 2025
Google search engine

Homeರಾಜ್ಯನ.24ರೊಳಗೆ ಜಾತಿ ಗಣತಿ ವರದಿ ಸಲ್ಲಿಕೆ: ಜಯಪ್ರಕಾಶ್​ ಹೆಗ್ಡೆ

ನ.24ರೊಳಗೆ ಜಾತಿ ಗಣತಿ ವರದಿ ಸಲ್ಲಿಕೆ: ಜಯಪ್ರಕಾಶ್​ ಹೆಗ್ಡೆ

ಬೆಂಗಳೂರು: ನವೆಂಬರ್​ 24ರೊಳಗೆ ಜಾತಿ ಗಣತಿ ವರದಿ ಸಲ್ಲಿಕೆ ಮಾಡುತ್ತೇನೆ ಎಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್​ ಹೆಗ್ಡೆ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಒಕ್ಕಲಿಗರ ಸಭೆಯಲ್ಲಿ ಜಾತಿಗಣತಿ ವರದಿ ಸ್ವೀಕರಿಸಿ ತಿರಸ್ಕರಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ಒಕ್ಕಲಿಗ ಸಮುದಾಯದ ನಾಯಕರು ತೀರ್ಮಾನಿಸಿದೆ.

ಇದರ ಬೆನ್ನಲ್ಲೇ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್​ ಹೆಗ್ಡೆ ಮಾತನಾಡಿ, ಶ್ರೀಗಳು ಯಾವ ಅರ್ಥದಲ್ಲಿ ಹೇಳಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಈಶ್ವರಪ್ಪ ಸಹ ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಶಿಕ್ಷಕರೇ ಹೋಗಿ ಜನಗಣತಿಯ ಅಂಕಿ-ಅಂಶ ಪಡೆದಿದ್ದಾರೆ. ಪರ-ವಿರೋಧಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮರು ಪರಿಶೀಲನೆ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು. ವರದಿ ಸರಿ ಇಲ್ಲ ಎಂದು ಯಾವ ಆಧಾರದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ನವೆಂಬರ್​ 24ರೊಳಗೆ ಜಾತಿ ಗಣತಿ ವರದಿ ಸಲ್ಲಿಕೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಜಾತಿಗಣತಿ ಬಗ್ಗೆ ಬೆಂಕಿಯುಗುಳಿರೋ ಸಚಿವ ಕೆಎಸ್ ಈಶ್ವರಪ್ಪ, ಕಾಂತರಾಜ್ ವರದಿಯನ್ನು ಬೆಂಕಿಗೆ ಹಾಕಿ ಸುಡಬೇಕು ಅಂತಾ ಹೇಳಿದ್ದಾರೆ. ಅಲ್ಲದೇ ಮಾಜಿ ಸಚಿವ ಕೆ.ಗೋಪಾಲಯ್ಯ, ಕಾಂತರಾಜ್ ವರದಿಯಿಂದ ಒಕ್ಕಲಿಗರಿಗೆ ನಷ್ಟವಾಗಲಿದೆ ಎಂದಿದ್ದಾರೆ.

RELATED ARTICLES
- Advertisment -
Google search engine

Most Popular