Monday, April 21, 2025
Google search engine

Homeರಾಜ್ಯನೇತ್ರಾವತಿ ನದಿಯಲ್ಲಿ ಅಪರಿಚಿತ ಶವ ಪತ್ತೆ

ನೇತ್ರಾವತಿ ನದಿಯಲ್ಲಿ ಅಪರಿಚಿತ ಶವ ಪತ್ತೆ

ಮಂಗಳೂರು(ದಕ್ಷಿಣ ಕನ್ನಡ): ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಶಂಭೂರು ಎ.ಎಂ‌.ಆರ್.ಡ್ಯಾಂ ನ ಬಳಿ ನೇತ್ರಾವತಿ ನದಿಯಲ್ಲಿ ನಡೆದಿದೆ.

ನದಿಯಲ್ಲಿ ಶವವೊಂದು ತೇಲಾಡುವುದು ಕಂಡು ಬಂದಿದ್ದನ್ನು ಗಮನಿಸಿದ ಎ.ಎಂ‌.ಆರ್.ಡ್ಯಾಂ ನ ಕಾರ್ಮಿಕರು ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇನ್ನು ಈ ಶವ ಸಂಪೂರ್ಣ ಕೊಳೆತು ಹೋಗಿದ್ದು ಸುಮಾರು 15 ದಿನಗಳ ಹಿಂದೆ ನದಿಗೆ ಬಿದ್ದಿರುವ ಬಗ್ಗೆ ಸಂಶಯವಿದೆ. ಮೃತ ವ್ಯಕ್ತಿ ಪುರುಷ ಅಥವಾ ಮಹಿಳೆಯ ಎಂಬುದನ್ನು ಗುರುತು ಹಿಡಿಯಲು ಅಸಾಧ್ಯವಾದ ಪರಿಸ್ಥಿತಿ ಇದ್ದು, ಕೈಯಲ್ಲಿ ಫ್ಯಾನ್ಸಿಯ ಬ್ರಾಸ್ಲೆಟ್ ಇದೆ ಎಂದು ಪೋಲೀಸರು ಮಾಹಿತಿ ನೀಡಿದ್ದಾರೆ.

ಶವವನ್ನು ಸಂಬಂಧಿಕರು ಗುರುತು ಪತ್ತೆ ಮಾಡುವವರೆಗೆ ಸಂರಕ್ಷಿಸುವ ‌ದೃಷ್ಟಿಯಿಂದ ಬಂಟ್ವಾಳ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ.

RELATED ARTICLES
- Advertisment -
Google search engine

Most Popular