ಮಂಡ್ಯ: ಸಂಜಯ್ ವೃತ್ತದಿಂದ ರೈತ ಹಿತರಕ್ಷಣಾ ಸಮಿತಿ ಹೋರಾಟ ವಿವಿಧ ಸಂಘಟನೆಗಳಿಂದ ಕಳೆದ ೬೨ ದಿನಗಳಿಂದ ನಡೆಯುತ್ತಿರುವ ನಿರಂತರ ಹೋರಾಟಕ್ಕೆ ಕೈ ಜೋಡಿಸಿದ ರಾಜಸ್ಥಾನ ಸಮಾಜ, ಮಂಡ್ಯದ ಸಂಜಯ್ ವೃತ್ತದಿಂದ ಧರಣಿ ಸ್ಥಳದ ವರೆಗೆ ಬೃಹತ್ ಮೆರವಣಿಗೆ ನಡೆಸಿದರು.
ಬಳಿಕ ಧರಣಿಯಲ್ಲಿ ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ತಮಿಳುನಾಡಿಗೆ ನೀರು ಬಿಟ್ಟಿರುವುದನ್ನ ಖಂಡಿಸಿ ಮತ್ತೆ ಯಾವುದೇ ಕಾರಣಕ್ಕೂ ನೀರು ಬಿಡಬಾರದೆಂದು ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆಯುತ್ತಿರುವ ನಿರಂತರ ಧರಣಿ, ಹೋರಾಟದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಿದರು.