Monday, April 21, 2025
Google search engine

Homeರಾಜ್ಯಸುದ್ದಿಜಾಲಸದಾ ಜನ ಸೇವೆಯಲ್ಲಿ ತೊಡಗಿಸಿಕೊಂಡಿರುವ ಮಾಜಿ ಶಾಸಕ ಕಳಲೆ ಕೇಶವಮೂರ್ತಿ: ದರ್ಶನ್ ಧ್ರುವನಾರಾಯಣ್

ಸದಾ ಜನ ಸೇವೆಯಲ್ಲಿ ತೊಡಗಿಸಿಕೊಂಡಿರುವ ಮಾಜಿ ಶಾಸಕ ಕಳಲೆ ಕೇಶವಮೂರ್ತಿ: ದರ್ಶನ್ ಧ್ರುವನಾರಾಯಣ್

ನಂಜನಗೂಡು: ಮಾಜಿ ಶಾಸಕ ಕಳಲೆ ಕೇಶವಮೂರ್ತಿರವರು ಯಾವುದೇ ಅಧಿಕಾರಕ್ಕೆ ಆಸೆ ಪಡೆದೆ ವಯಕ್ತಿಕ ಬದುಕನ್ನೂ ಬದಿಗೊತ್ತಿ ಸದಾ ಜನ ಸೇವೆಯಲ್ಲಿ ತಮ್ಮನ್ನು ತೊಡಗಿಸಿ ಕೊಂಡಿದ್ದಾರೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.


ಅವರು ನಗರದ ಕಾಂಗ್ರೇಸ್ ಪಕ್ಷದ ಕಚೇರಿಯಲ್ಲಿ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು ಏರ್ಪಡಿಸಿದ್ದ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ರವರ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಮಾಜಿ ಶಾಸಕರನ್ನು ಸನ್ಮಾನಿಸಿ ಮಾತನಾಡಿದರು. ಅವರು ಮದುವೆಯನ್ನೂ ಆಗದೆ ತಮ್ಮ ವಯಕ್ತಿ ಜೀವನವನ್ನೂ ಬದಿಗೊತ್ತಿ ಸಾರ್ವಜನಿಕರ ಸೇವೆಯಲ್ಲಿ ನಿರತರಾದವರು. ಅವರಿಗೆ ಅಧಿಕಾರ ಸಿಗಲಿ ಬಿಡಲಿ ಸದಾ ಜನರ ಸಮ್ಯೆಗಳಿಗೆ ಸ್ಪಂಧಿಸಿ ಅವರ ಸಂಕಷ್ಟ ಪರಿಹಾರಕ್ಕೆ ಮುಂದಾಗಿದ್ದಾರೆ.

ನಂಜನಗೂಡು ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷ ಸುಭದ್ರವಾಗಿರಲು ಕಾರಣ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ರವರ ಸಂಘಟನೆಯ ಫಲ. ಅವರು ಉಪ ಚುನಾವಣೆಯಲ್ಲಿ ಗೆದ್ದ ದಿನದಿಂದಲೂ ಸಹ ಪಕ್ಷದ ಸಂಘಟನೆಗೆ ಒತ್ತು ನೀಡಿ ಪಕ್ಷದ ಕಾರ್ಯಕ್ರಮಗಳನ್ನು ಚಾಚೂ ತಪ್ಪದೆ ಅನುಷ್ಠಾನಗೊಳಿಸುವ ಮೂಲಕ ಸಂಘಟನೆ ಪೂರಕವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ನನ್ನ ತಂದೆ ಆರ್.ಧ್ರುವನಾರಾಯಣ್ ರವರಿಗೆ ಸಹಕಾರ ನೀಡಿ ಇಬ್ಬರು ಜೋಡೆತ್ತು ಪಕ್ಷಕ್ಕೆ ಜೀವ ತುಂಬಿಸುವ ಕೆಲಸ ಮಾಡಿದ್ದಾರೆ.

೨೦೨೩ರ ಸಾರ್ವತ್ರಿಕ ಚುನಾವಣೆಯಲ್ಲೂ ಕೂಡ ತಾವೂ ಟಿಕೇಟ್ ಆಕಾಂಕ್ಷಿಯಾಗಿದ್ದರೂ ಸಹ ನನ್ನ ತಂದೆಯ ಮರಣ ನಂತರ ನನಗೆ ಟಿಕೇಟ್ ತ್ಯಾಗವನ್ನೂ ಮಾಡಿದ್ದಾರೆ. ಅಲ್ಲದೆ ನನಗೆ ಚುನಾವಣೆಯ ಬಗ್ಗೆ ಅರಿವಿರಲಿಲ್ಲ ಆದರೂ ಸಹ ನನಗೆ ಆತ್ಮಸ್ಥೈರ್ಯ ತುಂಬಿ ಚುನಾವಣೆಯಲ್ಲಿ ಗೆಲುವು ತಂದುಕೊಟ್ಟಿದ್ದು ಮಾತ್ರವಲ್ಲದೆ ಒಬ್ಬ ಶಾಸಕನಾಗಿ ಹೇಗೆ ಕೆಲಸ ಮಾಡಬೇಕೆಂಬ ಮಾರ್ಗದರ್ಶನ ಮಾಡುತ್ತಾ ಜನ ಸೇವೆಯಲ್ಲಿ ತೊಡಗಿದ್ದಾರೆ. ಅವರಿಗೆ ದೇವರು ಆಯಸ್ಸು ಆರೋಗ್ಯಕೊಟ್ಟು ಕಾಪಾಡಲಿ ಎಂದು ಶುಭಹಾರೈಸಿದರು.

ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ.ಬಸವರಾಜು ಮಾತನಾಡಿ ಕಳಲೆ ಕೇಶವಮೂರ್ತಿ ರವರು ನಾನು ಜೊತೆಯಲ್ಲೇ ರಾಜಕೀಯ ಮಾಡಿಕೊಂಡು ಬಂದವರು. ನಾನು ಜಿಪಂ ಅಧ್ಯಕ್ಷ ವಾಲ್ಮೀಕಿ ನಿಗಮದ ಅಧ್ಯಕ್ಷನಾಗಿಯೂ ಆಯ್ಕೆಯಾದೆ. ಆದರೆ ಕೇಶವಮೂರ್ತಿ ರವರು ಜೆಡಿಎಸ್ ಪಕ್ಷದಲ್ಲಿದ್ದಾಗಲೂ ಸಹ ಯಾರ ಜೊತೆಯೂ ಅಧಿಕಾರಕ್ಕಾಗಿ ಪೈಪೋಟಿಗೆ ನಿಲ್ಲದೆ ತಮಗೆ ದೊರಕಿದ್ದ ಟಿಕೇಟ್‌ನ್ನು ಸಹ ಬೇರೆಯವರಿಗೆ ಬಿಟ್ಟುಕೊಟ್ಟು ಅಧಿಕಾರ ತ್ಯಾಗ ಮಾಡಿ ರಾಜಕಾರಣ ಮಾಡುವ ಮೂಲಕ ಜನಸೇವೆಯಲ್ಲಿ ತೊಡಗಿಸಿಕೊಂಡವರು. ಅವರ ಪರಿಶ್ರಮದ ಫಲವಾಗಿ ಉಪಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿ ಶಾಸಕರಾಗಿ ಆಯ್ಕೆಯಾದವರು. ಈ ಸಾರ್ವತ್ರಿಕ ಚುನಾವಣೆಯಲ್ಲಿ ತಮಗೆ ಟಿಕೇಟ್ ಬೇಕು ಎಂಬ ಹಠ ಹಿಡಿಯದೆ ಪಕ್ಷದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ಪಕ್ಷ ಸಂಘಟನೆಗೆ ಒತ್ತು ನೀಡಿದ ತ್ಯಾಗಮೂರ್ತಿ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಕಳಲೆ ಕೇಶವಮೂರ್ತಿ ರವರು ನಿಮ್ಮೆಲ್ಲರ ಪ್ರೀತಿ ವಿಶ್ವಾಸಕ್ಕೆ ನಾನು ಸದಾ ಚಿರಋಣಿ, ನನ್ನ ಹುಟ್ಟು ಹಬ್ಬಕ್ಕೆ ಶುಭ ಹಾರೈಸಿದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ ಜೊತಗೆ ನಿಮ್ಮೆಲ್ಲರ ಸೇವೆ ಮಾಡುವ ಮೂಕ ನಿಮ್ಮ ಪ್ರೀತಿ ವಿಶ್ವಾಸವನ್ನು ಉಳಿಸಿಕೊಳ್ಳುವ ಕೆಲಸ ಮಾಡುತ್ತೇನೆ ಎಂದರು. ಇದೇ ಸಂಧರ್ಭದಲ್ಲಿ ೧೦೦ ಮೀಟರ್ ಓಟದಲ್ಲಿ ರಾಜ್ಯಕ್ಕೆ ೨ನೇ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ತಾಲೂಕಿನ ಹೊಸಪುರ ಗ್ರಾಮದ ಜೀವಿತ ರವರನು ಅಭಿನಂದಿಸಿ ಸನ್ಮಾನಿಸಲಾಯಿತು.

ಇದೇ ಸಂಧರ್ಭದಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಕುರಹಟ್ಟಿಮಹೇಶ್, ಸಿ.ಎಂ.ಶಂಕರ್, ಶ್ರೀಕಂಠನಾಯಕ, ಜಿಪಂ ಮಾಜಿ ಸದಸ್ಯರಾದ ಲತಾಸಿದ್ದಶೆಟ್ಟಿ, ಕೆ.ಮಾರುತಿ, ಕಾಂಗ್ರೇಸ್ ಜಿಲ್ಲಾ ಕಾರ್ಯದರ್ಶಿ ಕರಳಪುರನಾಗರಾಜು, ಕನಕನಗರ ಮಹದೇವು, ಮಾಜಿ ಪುರಸಭಾಧ್ಯಕ್ಷ ಚೆಲುವರಾಜು, ಮುಖಂಡರಾದ ಎಂ.ಮಾದಪ್ಪ, ಸಿದ್ದಶೆಟ್ಟಿ, ದೊರೆಸ್ವಾಮಿನಾಯಕ, ವಿಜಯ್‌ಕುಮಾರ್, ಶ್ರೀನಿವಾಸ್‌ಮೂರ್ತಿ, ನಂಜುಂಡಸ್ವಾಮಿ, ಕಳಲೆರಾಜೇಶ್, ಉಪ್ಪಿನಹಳ್ಳಿಶಿವಣ್ಣ, ಜಗದೀಶ್, ರಂಗದಾಸ್, ನಗರಸಭಾ ಸದಸ್ಯರಾದ ಎಸ್.ಪಿ.ಮಹೇಶ್, ಮಾಜಿ ನಗರಸಭಾ ಸದಸ್ಯ ಮಂಜುನಾಥ್ ಸೇರಿದಂತೆ ಹಲವಾರು ಪ್ರಮುಖರು ಇದ್ದರು.

RELATED ARTICLES
- Advertisment -
Google search engine

Most Popular