ಧಾರವಾಡ : ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ: ಹೆಚ್.ಸಿ. ಮಹಾದೇವಪ್ಪ ಅವರು ನ.೮ ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸಚಿವರು ನ.೭ ರಂದು ರಾತ್ರಿ ೮-೩೦ ಗಂಟೆಗೆ ಇಂಡಿಗೋ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ನ.೮ ರಂದು ಬೆಳಿಗ್ಗೆ ೧೧ ಗಂಟೆಗೆ ಧಾರವಾಡಕ್ಕೆ ಆಗಮಿಸಿ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಬೆಳಗಾವಿ ವಿಭಾಗದ ಎಲ್ಲಾ ಜಿಲ್ಲೆಗಳ ನಿಗಮ, ಮಂಡಳಿ, ಆಯೋಗಗಳು ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿಸುವರು. ಸಂಜೆ ೫ ಗಂಟೆಗೆ ಹುಬ್ಬಳ್ಳಿಗೆ ತೆರಳಿ ರಾತ್ರಿ ೯ ಗಂಟೆಗೆ ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದುಸಚಿವರ ಆಪ್ತಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.