Saturday, April 19, 2025
Google search engine

Homeರಾಜ್ಯಸುದ್ದಿಜಾಲಡಿ ರವಿಶಂಕರ್ ರವರ ನೇತೃತ್ವದಲ್ಲಿ ಸಾರ್ವಜನಿಕರ ಹಾಗೂ ಕ್ರೀಡಾಪಟುಗಳ ಸಭೆ

ಡಿ ರವಿಶಂಕರ್ ರವರ ನೇತೃತ್ವದಲ್ಲಿ ಸಾರ್ವಜನಿಕರ ಹಾಗೂ ಕ್ರೀಡಾಪಟುಗಳ ಸಭೆ

ಕೆ.ಆರ್.ನಗರ: ಶಾಸಕ ಡಿ ರವಿಶಂಕರ್ ರವರ ನೇತೃತ್ವದಲ್ಲಿ ಇಂದು ಕೃಷ್ಣರಾಜ ಕ್ರೀಡಾಂಗಣದ ಅಭಿವೃದ್ಧಿ ಬಗ್ಗೆ ಸಾರ್ವಜನಿಕರ ಹಾಗೂ ಕ್ರೀಡಾಪಟುಗಳ ಸಭೆ ನಡೆಸಿ ಕ್ರೀಡಾಂಗಣದ ಅಭಿವೃದ್ಧಿಗೆ ಕ್ರೀಡಾಪಟುಗಳಿಂದ ಹಾಗೂ ಸಾರ್ವಜನಿಕರಿಂದ ಸಲಹೆ ಪಡೆದು ಕ್ರೀಡಾಂಗಣವನ್ನು ಉನ್ನತ ರೀತಿಯಲ್ಲಿ ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಕ್ರೀಡಾಪಟುಗಳು ಕ್ರೀಡಾಂಗಣದಲ್ಲಿ ಮೂಲ ಸೌಕರ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ,ರಾತ್ರಿ ಸಮಯದಲ್ಲಿ ಕುಡುಕರ ಹಾವಳಿಯಾಗಿದ್ದು ಇವೆಲ್ಲವನ್ನು ಸರಿಪಡಿಸಬೇಕಾಗಿ ಮನವಿ ಮಾಡಿದರು. ಸಾರ್ವಜನಿಕರ ಸಲಹೆಗಳನ್ನು ಸ್ವೀಕರಿಸಿ ಮಾತನಾಡಿದ ಶಾಸಕ ಡಿ ರವಿಶಂಕರ್ ಅವರು ಈ ವರ್ಷ ಯಾವುದೇ ಅನುದಾನ ಇಲ್ಲದ ಕಾರಣ ಉಳಿದಿರುವ ಸಣ್ಣಪುಟ್ಟ ಕೆಲಸಗಳನ್ನು ಮಾಡಿಸಿ ಮೂಲ ಸೌಕರ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆ ಶೌಚಾಲಯ ಹಾಗೂ ಕಾವಲುಗಾರರಿಗೆ ಸಂಬಳದ ವ್ಯವಸ್ಥೆ, ಕ್ರೀಡಾಪಟುಗಳಿಗೆ ಬೇಕಾದ ವ್ಯವಸ್ಥೆಯನ್ನು ಮುಂದಿನ ದಿನಗಳಲ್ಲಿ ಕ್ರೀಡಾಂಗಣದ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮತ್ತೊಂದು ಸಭೆ ನಡೆಸಿ ಶೀಘ್ರದಲ್ಲಿಯೇ ಕ್ರೀಡಾಂಗಣವನ್ನು ಉನ್ನತ ಮಟ್ಟದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ತಹಸಿಲ್ದಾರ್ ಪೂರ್ಣಿಮಾ ಮತ್ತು ಯುವಜನ ಕ್ರೀಡಾ ಇಲಾಖೆಯ ಅಧಿಕಾರಿ ಭಾಸ್ಕರ್ ನಾಯಕ್ ಮತ್ತು ಪುರಸಭಾ ಅಧಿಕಾರಿಗಳು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular