Saturday, April 19, 2025
Google search engine

Homeರಾಜ್ಯಸುದ್ದಿಜಾಲನಾಳೆ ಬರಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಶಿವಾನಂದ ಮೂರ್ತಿ

ನಾಳೆ ಬರಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಶಿವಾನಂದ ಮೂರ್ತಿ

ರಾಮನಗರ: ಜಿಲ್ಲೆಯ ಬರ ಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರು ನಾಳೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ರಾಮನಗರ, ಕನಕಪುರ ಮತ್ತು ಹಾರೋಹಳ್ಳಿ ತಾಲ್ಲೂಕುಗಳನ್ನು ತೀವ್ರ ಬರ ಪೀಡಿತ ತಾಲ್ಲೂಕುಗಳೆಂದು ಮಾಗಡಿ ಮತ್ತು ಚನ್ನಪಟ್ಟಣ ತಾಲ್ಲೂಕುಗಳನ್ನು ಸಾಧಾರಣಾ ಬರ ಪೀಡಿತ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ನಾಳೆ(ನ.೦೮) ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಅಲಿಸಲಿದ್ದಾರೆ. ಆದುದರಿಂದ ಅಧಿಕಾರಿಗಳು ಬರ ಪೀಡಿತ ಪ್ರದೇಶಗಳನ್ನು ಗುರುತಿಸಿ ಅವುಗಳ ಅಂಕಿಅಂಶಗಳನ್ನು ಸಿದ್ದಪಡಿಸಿಕೊಳ್ಳುವಂತೆ ಸೂಚಿಸಿದರು.

ಕಾರ್ಯ ನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರುಗಳು, ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಸಚಿವರು ವೀಕ್ಷಿಸುವ ಸ್ಥಳಗಳನ್ನು ಖುದ್ದು ಭೇಟಿ ನೀಡಿ ಒಮ್ಮೆ ಪರಿಶೀಲಿಸಿಕೊಂಡು ಅಂಕಿ ಅಂಶಗಳೊಂದಿಗೆ ಹಾಜರಿರಬೇಕು ಹಾಗೂ ಸಚಿವರು ರೈತರ ಸಮಸ್ಯೆಗಳನ್ನು ಆಲಿಸುವುದರಿಂದ ಸಾರ್ವಜನಿಕ ಸಭೆಯನ್ನು ಏರ್ಪಡಿಸುವಂತೆ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು ಮರಳವಾಡಿ, ಹಾರೋಹಳ್ಳ್ಳಿ ಪಟ್ಟಣ ಪಂಚಾಯಿತಿ ಆವರಣದಲ್ಲಿ ರೈತರ ಸಭೆ, ಶಿವನಹಳ್ಳಿ, ನಲ್ಲಹಳ್ಳಿ, ಕಬ್ಬಾಳು, ಜಗದಾಪುರ, ಜೆ.ಬ್ಯಾಡರಹಳ್ಳಿ, ಗೊಲ್ಲರದೊಡ್ಡಿ ಪ್ರದೇಶಗಳಲ್ಲಿ ಬರಪೀಡಿತ ಪ್ರದೇಶಗಳನ್ನು ವೀಕ್ಷಿಸಲಿದ್ದಾರೆ ನಂತರ ರಾಮನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರೈತರು ಹಾಗೂ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಭಾಗವಹಿಸಿಲಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ರಾಮನಗರ ತಾಲ್ಲೂಕು ಕಾರ್ಯನಿರ್ವಾಕಾಧಿಕಾರಿ ಪ್ರದೀಪ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಅಂಬಿಕಾ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಮುನೇಗೌಡ, ರೇಷ್ಮೆ ಇಲಾಖೆಯ ಉಪ ನಿರ್ದೇಶಕ ಬಸವರಾಜು, ಜಿಲ್ಲಾ ಸಂಖ್ಯಾಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

RELATED ARTICLES
- Advertisment -
Google search engine

Most Popular