Saturday, April 19, 2025
Google search engine

Homeರಾಜ್ಯಸುದ್ದಿಜಾಲಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೇರಿದಂತೆ ಅಗತ್ಯ ಸೌಲಭ್ಯ: ಡಾ.ಮಂತರ್ ಗೌಡ

ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೇರಿದಂತೆ ಅಗತ್ಯ ಸೌಲಭ್ಯ: ಡಾ.ಮಂತರ್ ಗೌಡ


ಮಡಿಕೇರಿ: ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೇರಿದಂತೆ ಸರ್ಕಾರದಿಂದ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ.
ಮಡಿಕೇರಿ ನಗರಸಭೆ ವತಿಯಿಂದ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಮಂಗಳವಾರ ನಡೆದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪೌರಕಾರ್ಮಿಕರಿಗಾಗಿ ಸರ್ಕಾರ ಹಲವು ಸೌಲಭ್ಯಗಳನ್ನು ಕಲ್ಪಿಸಿದ್ದು, ಅವುಗಳನ್ನು ಬಳಸಿಕೊಂಡು ಉತ್ತಮ ಜೀವನ ನಡೆಸಬೇಕು. ತಾವು ಕರ್ತವ್ಯ ಸಂದರ್ಭದಲ್ಲಿ ಸೂಕ್ತ ರಕ್ಷಣಾ ಸಾಮಾಗ್ರಿಗಳನ್ನು ಬಳಸಿ ಕಾರ್ಯನಿರ್ವಹಿಸಬೇಕು ಎಂದು ಶಾಸಕರು ಸಲಹೆ ಮಾಡಿದರು.
ಪೌರಕಾರ್ಮಿಕರು ರಜೆ ಕೇಳಿದ್ದಲ್ಲಿ ನೀಡಬೇಕು. ಯಾವುದೇ ಕಾರಣಕ್ಕೂ ಸತಾಯಿಸಬಾರದು. ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸುವುದರ ಜೊತೆಗೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಒತ್ತು ನೀಡಬೇಕು ಎಂದು ಡಾ.ಮಂತರ್ ಗೌಡ ಅವರು ಸಲಹೆ ಮಾಡಿದರು.ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಎಲ್ಲೆಂದರಲ್ಲಿ ಬಿಸಾಡುವವರಿಂದ ದಂಡ ವಸೂಲಿ ಮಾಡಬೇಕು. ಈ ರೀತಿ ಆದಲ್ಲಿ ಪ್ರತಿಯೊಬ್ಬರೂ ಎಚ್ಚರವಹಿಸಲು ಸಾಧ್ಯ ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ನುಡಿದರು.
ನಗರಸಭೆಯಲ್ಲಿ ಓಬಳಿಯಂತ ಪೌರಕಾರ್ಮಿಕರು ನಾಲ್ಕು ದಶಕಗಳ ಕಾಲ ದುಡಿದಿದ್ದಾರೆ. ಅವರ ಆರೋಗ್ಯಕ್ಕೆ ಅಗತ್ಯ ನೆರವು ನೀಡಬೇಕು ಎಂದ ಶಾಸಕರು, ಓಬಳಿ ಅವರಿಗೆ ವೈಯಕ್ತಿಕವಾಗಿ ೧೦ ಸಾವಿರ ರೂ.ವನ್ನು ಇದೇ ಸಂದರ್ಭದಲ್ಲಿ ನೀಡಿದರು. ಜೊತೆಗೆ ಹುಟ್ಟುಹಬ್ಬದ ಪ್ರಯುಕ್ತ ಪೌರಕಾರ್ಮಿಕರಿಗೆ ಶಾಸಕರು ವಸ್ತ್ರ ವಿತರಿಸಿದರು.
ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರು ಮಾತನಾಡಿ ಪೌರಕಾರ್ಮಿಕರು ಮಡಿಕೇರಿ ನಗರದ ಕಿರೀಟವಿದ್ದಂತೆ, ಪೌರಕಾರ್ಮಿಕರು ಒಂದು ದಿನ ಸ್ವಚ್ಛತಾ ಕಾರ್ಯ ಕೈಗೊಳ್ಳದಿದ್ದಲ್ಲಿ ಊಹಿಸಿಕೊಳ್ಳುವುದು ಕಷ್ಟಸಾಧ್ಯ. ಆದ್ದರಿಂದ ಪೌರಕಾರ್ಮಿಕರನ್ನು ಗೌರವಿಸಬೇಕು ಎಂದರು.

RELATED ARTICLES
- Advertisment -
Google search engine

Most Popular