ಧಾರವಾಡ : ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿ, ಸಿಡಿಮದ್ದುಗಳ ಮಾರಾಟ ಮತ್ತು ಅದನ್ನು ನಿಯಂತ್ರಿಸುವ ಉದ್ದೇಶದಿಂದ ನಿಯಮ ಉಲ್ಲಂಘಿಸಿ ಪಟಾಕಿ, ಸಿಡಿಮದ್ದುಗಳ ಅನಧಿಕೃತವಾಗಿ ತಯಾರಿ, ಮಾರಾಟ ಮಾಡುವ ವ್ಯಕ್ತಿ, ಸಂಸ್ಥೆಗಳ ಮೇಲೆ ಕಾನೂನು ಕ್ರಮ ಜರುಗಿಸಲು ಅಧಿಸೂಚನೆ ಮೂಲಕ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಿಗೆ ಆದೇಶಿಸಲಾಗಿದೆ. ಅದರಂತೆ ನಗರ ಸ್ಥಳೀಯ ಸಂಸ್ಥೆಗಳು ಜಿಲ್ಲೆಯಲ್ಲಿ ನಿಷೇಧಿತ ಪಟಾಕಿ, ಸಿಡಿಮದ್ದುಗಳ ಮಾರಾಟ ಮತ್ತು ಬಳಕೆಯನ್ನು ನಿಯಂತ್ರಿಸುವ ಮತ್ತು ನಿಷೇಧಿಸುವುದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.