Monday, April 21, 2025
Google search engine

Homeರಾಜ್ಯಸುದ್ದಿಜಾಲಬಾಣಂತಿಯರಿಗೆ ರಕ್ತ ಹೀನತೆ, ಪೌಷ್ಟಿಕ ಆಹಾರ ಸೇವನೆ ಮುಖ್ಯ: ಡಾ.ಜಿ.ಎನ್.ಶ್ರೀನಿವಾಸ

ಬಾಣಂತಿಯರಿಗೆ ರಕ್ತ ಹೀನತೆ, ಪೌಷ್ಟಿಕ ಆಹಾರ ಸೇವನೆ ಮುಖ್ಯ: ಡಾ.ಜಿ.ಎನ್.ಶ್ರೀನಿವಾಸ


ಬಳ್ಳಾರಿ: ಬಾಣಂತಿಯರಲ್ಲಿ ರಕ್ತಹೀನತೆಯನ್ನು ಕಡಿಮೆಗೊಳಿಸಲು, ಗರ್ಭೀಣಿಯ ಅವಧಿಯಲ್ಲಿ ಸಕಾಲದಲ್ಲಿ ರಕ್ತಹೀನತೆ ಪರೀಕ್ಷೆ ಕೈಗೊಳ್ಳುವ ಮೂಲಕ ತಾಯಿ, ಮಗುವಿನ ಸುರಕ್ಷತೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ ಆಹಾರ ಸೇವನೆಯ ಕುರಿತು ಜಾಗೃತಿ ಮೂಡಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ಆರ್‍ಸಿಹೆಚ್‌ನ ಯೋಜನಾ ನಿರ್ದೇಶಕ ಡಾ.ಜಿ.ಎನ್.ಶ್ರೀನಿವಾಸ ಅವರು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್‌ನ ನಜೀರ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾನೂನಿನ ಅನ್ವಯ ೧೮ ವರ್ಷ ವಯಸ್ಸು ತುಂಬಿದ ನಂತರವೇ ಮದುವೆ ಮಾಡುವುದರ ಕುರಿತು ಕುರಿತು ಜನತೆಗೆ ಜಾಗೃತಿ ಮೂಡಿಸಬೇಕು. ಮನೆಗೆ ಬಂದ ಸೊಸೆಯು ಗರ್ಭೀಣಿ ಎಂದು ತಿಳಿದ ದಿನದಿಂದಲೇ ಗರ್ಭಿಣಿಯ ಆರೈಕೆಯನ್ನು ಕುಟುಂಬದ ಸದಸ್ಯರು ಮನೆಯ ಮಗಳಂತೆ ಕಾಳಜಿ ವಹಿಸಬೇಕು. ಹೆರಿಗೆಯನ್ನು ಆಸ್ಪತ್ರೆಯಲ್ಲಿಯೇ ಮಾಡಿಸಲು ಆದ್ಯತೆ ನೀಡುವಂತೆ ಜಾಗ್ರತೆ ವಹಿಸಬೇಕು ಎಂದು ತಿಳಿಸಿದರು.

ಗರ್ಭಿಣಿ ಎಂದು ತಿಳಿದ ದಿನದಿಂದಲೇ ತಾಯಿಕಾರ್ಡ್ ಒದಗಿಸಬೇಕು. ರಕ್ತ ಹೀನತೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಮಟ್ಟದಲ್ಲಿ ಪರೀಕ್ಷೆ ಕೈಗೊಂಡು ತಡೆಯಲು ಕನಿಷ್ಠ ೧೮೦ ಕಬ್ಬಿಣಾಂಶ ಮಾತ್ರೆಗಳನ್ನು ಪ್ರತಿದಿನ ಒಂದರಂತೆ ಸೇವಿಸುವಂತೆ ಆಶಾಕಾರ್ತೆಯರು ತಿಳಿಸಬೇಕು ಎಂದು ಸೂಚಿಸಿದರು.
ಸ್ಥಳೀಯವಾಗಿ ದೊರಕುವ ಹಸಿರು ಪಲ್ಯ ತರಕಾರಿ ಹೊಂದಿದ ಪೌಷ್ಟಿಕ ಆಹಾರವನ್ನು ಸೇವಿಸುವಂತೆ ಮತ್ತು ಆಹಾರ ತಯಾರಿಸುವ ವಿಧಾನವನ್ನು ತಿಳಿಸುವ ಮೂಲಕ ಗರ್ಭಿಣಿಯರಲ್ಲಿ ರಕ್ತಹೀನತೆಯನ್ನು ಆರಂಭದಲ್ಲೇ ತಡೆಯುವ ಅಗತ್ಯವಿದೆ ಎಂದು ಹೇಳಿದರು.

ಆರೋಗ್ಯ ಕೇಂದ್ರಕ್ಕೆ ಬರುವ ಹಿರಿಯ ನಾಗರಿಕರು ಹಾಗೂ ಜನಸಾಮಾನ್ಯರನ್ನು ರಕ್ತದೊತ್ತಡ ಪರೀಕ್ಷೆ, ಸಕ್ಕರೆ ಕಾಯಿಲೆ ಪರೀಕ್ಷೆ ಕ್ಷಯರೋಗದ ಪರೀಕ್ಷೆ, ನೇತ್ರ ಪರೀಕ್ಷೆ ಮುಂತಾದವುಗಳನ್ನು ಕೈಗೊಂಡು ಅವರಿಗೆ ಅಗತ್ಯವಿದ್ದಲ್ಲಿ ಸೂಕ್ತ ಔಷದೋಪಚಾರ ಮಾಹಿತಿ ನೀಡುವ ಮೂಲಕ ಪ್ರಾಥಮಿಕ ಆರೋಗ್ಯ ಕೇಂದ್ರ ಮಟ್ಟದಲ್ಲಿ ಜನತೆಯ ವಿಶ್ವಾಸ ಗಳಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲೆಯಲ್ಲಿ ಆಯುಷ್ಮಾನ್ ಭವಃ ಅಭಿಯಾನದ ಪ್ರಗತಿ, ಅಂಗಾಂಗ ದಾನ ನೋಂದಣಿ, ಕುಟುಂಬ ಕಲ್ಯಾಣ ವಿಧಾನಗಳು, ಡೆಂಗ್ಯು ಮತ್ತು ಚಿಕನ್‌ಗುನ್ಯ ನಿಯಂತ್ರಣ, ಬಾಲ್ಯದಲ್ಲಿ ಕಾಡುವ ಮಾರಕ ರೋಗಗಳ ನಿಯಂತ್ರಣಕ್ಕೆ ಮಕ್ಕಳ ಲಸಿಕಾ ಕಾರ್ಯಕ್ರಮ, ಅಂಧತ್ವ ನಿಯಂತ್ರಣ, ಮಾನಸಿಕ ಆರೋಗ್ಯ ಕಾರ್ಯಕ್ರಮ ಕುರಿತು ಪರಿಶೀಲಿಸಿದ ಅವರು, ರಾಜ್ಯಕ್ಕೆ ಬಳ್ಳಾರಿ ಜಿಲ್ಲೆ ಮಾದರಿಯಾಗುವಂತೆ ಕರ್ತವ್ಯ ನಿರ್ವಹಿಸಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ಇದೇ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ ರಮೇಶ್ ಬಾಬು ಅವರು, ಜಿಲ್ಲೆಯಲ್ಲಿನ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಕೈಗೊಳ್ಳಲಾಗಿರುವ ವಿವಿಧ ಕಾರ್ಯಕ್ರಮಗಳ ಮಾಹಿತಿಯನ್ನು ಸಭೆಗೆ ತಿಳಿಸಿದರು.

RELATED ARTICLES
- Advertisment -
Google search engine

Most Popular