ಚಾಮರಾಜನಗರ: ದೀಪಾವಳಿ ಜಾತ್ರಾ ಸಂಬಂಧದ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಇಂದು ನ.11ರ ಸಂಜೆ 6 ಗಂಟೆಯಿಂದ ನ. 14ರ ಸಂಜೆ 7 ಗಂಟೆಯವರೆಗೆ ಜಾತ್ರೆಗೆ ದ್ವಿಚಕ್ರ ವಾಹನಗಳು ಹಾಗೂ ಆಟೋ ರಿಕ್ಷಾ ವಾಹನಗಳಲ್ಲಿ ತೆರಳವುದನ್ನು ತಾತ್ಕಾಲಿಕವಾಗಿ ನಿರ್ಬಂಧ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಆದೇಶ ಹೊರಡಿಸಿದ್ದಾರೆ.
ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಸುಮಾರು ಲಕ್ಷಾಂತರ ಭಕ್ತಾಧಿಗಳು ಸೇರುವ ಸಂಭವವಿದ್ದು, ವಾಹನ ದಟ್ಟಣೆ ಹೆಚ್ಚಾಗುವುದರಿಂದ ಸದರಿ ರಸ್ತೆಯು ಅರಣ್ಯ ಪ್ರದೇಶ ಹಾಗೂ ತುಂಬಾ ಕಡಿದಾದ ತಿರುವುಗಳಿಂದ ಕೂಡಿದ್ದು, ಸದರಿ ರಸ್ತೆಯ ಸಂಚಾರದಲ್ಲಿ ವಾಹನಗಳ ದಟ್ಟಣೆ ಉಂಟಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ, ನಿಯಮಾವಳಿ ಹಾಗೂ ಸಂಚಾರಿ ನಿಯಂತ್ರಣ ಕಾಯ್ದೆ ಅನ್ವಯ ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ಹಾಗೂ ಆಟೋ ರಿಕ್ಷಾ ವಾಹನಗಳಲ್ಲಿ ತೆರಳುವುದನ್ನು ನ. 11ರ ಸಂಜೆ 6 ಗಂಟೆಯಿಂದ ನ. 14ರ ಸಂಜೆ 7 ಗಂಟೆಯವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.