Saturday, April 19, 2025
Google search engine

Homeಸಿನಿಮಾಮಾಲಾಶ್ರೀ ಮನೆಯಲ್ಲಿ ದೀಪಾವಳಿ ಸಂಭ್ರಮ

ಮಾಲಾಶ್ರೀ ಮನೆಯಲ್ಲಿ ದೀಪಾವಳಿ ಸಂಭ್ರಮ

ಮಾಲಾಶ್ರೀ ಹಾಗೂ ರಾಮು ಅವರ ಪುತ್ರಿ ಆರಾಧನಾ ರಾಮ್ ಕಾಟೇರ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡುತ್ತಿರುವುದು ಗೊತ್ತಿರುವ ವಿಚಾರ. ‘ಕಾಟೇರ’ದ ವಿಭಿನ್ನ ಪೋಸ್ಟರ್‌ಗಳು ಸಿನಿಮಾದ ಬಗ್ಗೆ ಕುತೂಹಲ ಮೂಡಿಸಿದೆ. ಇದೀಗ ಆರಾಧನಾ ರಾಮ್ ಬೆಳಕಿನ ಹಬ್ಬ ದೀಪಾವಳಿಯನ್ನು ಅತ್ಯಂತ ಅದ್ಧೂರಿಯಾಗಿ ಮತ್ತು ಸಾಂಪ್ರದಾಯಿಕವಾಗಿ ಆಚರಿಸಿದ್ದಾರೆ.
ಈ ವರ್ಷದ ದೀಪಾವಳಿ ಮಾಲಾಶ್ರೀ ಹಾಗೂ ರಾಮು ಮನೆಯಲ್ಲಿ ಸಂಭ್ರಮ ಹೆಚ್ಚಿಸಿದೆ. ಈ ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲು ಮಾಲಾಶ್ರೀ ಅವರು ಮಗಳು ಆರಾಧನಾ ಜೊತೆ ಹೊಸ ಲುಕ್‌ನಲ್ಲಿ ಮಿಂಚಿದ್ದಾರೆ. ಅಮ್ಮ ಮಗಳು ನಮ್ಮ ದೇಶಿ ಸಂಸ್ಕೃತಿಯನ್ನು ಎತ್ತಿ ಹಿಡಿಯುವುದರ ಜೊತೆಗೆ ಮೈಸೂರಿನ ರೇಷ್ಮೆ ಸೀರೆಯಲ್ಲಿ ಮಿಂಚಿದ್ದಾರೆ.

ಈ ವರ್ಷ ನನ್ನ ಮಗಳು ಕಾಟೇರ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದಾಳೆ. ನನಗೆ ತಾವು ನೀಡಿರುವ ಪ್ರೋತ್ಸಾಹ ನನ್ನ ಮಗಳಿಗೂ ನೀಡಿ ಎಂದು ಹೇಳಿದರು. ಕಾಟೇರ ಚಿತ್ರತಂಡ ದೀಪಾವಳಿಗೆ ಜನತೆಗೆ ಶುಭಕೋರಲು ಹೊಸ ಪೋಸ್ಟರ್ ಅನ್ನು ಹಂಚಿಕೊಂಡಿದೆ. ಈ ದೀಪಾವಳಿ ನಿಮ್ಮ ಬದುಕಿನಲ್ಲಿ ಖುಷಿಯ ಬೆಳಕನ್ನು ತುಂಬಲಿ. ಈ ಹಬ್ಬ ಸಂತೋಷ, ಸಮೃದ್ಧಿ, ಶಾಂತಿ, ನೆಮ್ಮದಿಯನ್ನು ಹೊತ್ತು ತರಲಿ. ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ದೀಪಾವಳಿ ಹಬ್ಬದ ಶುಭಾಶಯಗಳು ಎಂದು ಕನ್ನಡಿಗರಿಗೆ ಚಿತ್ರತಂಡ ಶುಭಕೋರಿದೆ.

RELATED ARTICLES
- Advertisment -
Google search engine

Most Popular