ಮೈಸೂರು: ಇಂದು ನ.೧೪ ನೆಹರು ಜನ್ಮದಿನದ ಅಂಗವಾಗಿ ದೇಶಾದ್ಯಂತ ಮಕ್ಕಳ ದಿನಾಚರಣೆ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ೧೨ ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರವೇಶ ಸೌಲಭ್ಯ ನೀಡಲಾಗಿದೆ.
ಮಕ್ಕಳ ದಿನಾಚರಣೆಯನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ ಮಕ್ಕಳಿಗೆ ಮೃಗಾಲಯ ವೀಕ್ಷಣೆಗೆ ಉಚಿತ ಪ್ರವೇಶ ನೀಡಲಾಗಿದೆ.ಇಂದು ಮಂಗಳವಾರ ಬೆಳಗ್ಗೆ ೮:೩೦ರಿಂದ ಮಧ್ಯಹ್ನ ೧ ಗಂಟೆಗೆಯವರೆಗೆ ಮಕ್ಕಳಿಗೆ ಉಚಿತ ಪ್ರವೇಶದ ಅವಕಾಶ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವರ್ಷ ಮಕ್ಕಳ ದಿನದಂದೇ ದೀಪಾವಳಿ ಹಬ್ಬವೂ ಇದ್ದು, ಸರ್ಕಾರಿ ರಜೆ ನೀಡಲಾಗಿದೆ. ಹೀಗಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಆಗಮಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಭಾವಿಸಿದ್ದಾರೆ.
ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮದಿನವಾದ ನವೆಂಬರ್ ೧೪ರಂದು ಮಕ್ಕಳ ದಿನಾಚರಣೆ ಆಚರಿಸಲಾಗುತ್ತದೆ.