Monday, April 21, 2025
Google search engine

Homeರಾಜ್ಯಮಧ್ಯಪ್ರದೇಶ ಚುನಾವಣೆ: ಬಹಿರಂಗ ಪ್ರಚಾರ ಅಂತ್ಯ, ೨೩೦ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನಾಳೆ ಮತದಾನ

ಮಧ್ಯಪ್ರದೇಶ ಚುನಾವಣೆ: ಬಹಿರಂಗ ಪ್ರಚಾರ ಅಂತ್ಯ, ೨೩೦ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನಾಳೆ ಮತದಾನ

ಮಧ್ಯಪ್ರದೇಶ: ವಿಧಾನಸಭಾ ಚುನಾವಣೆ ಹಿನ್ನೆಲೆ ಶುಕ್ರವಾರ ಮತದಾನ ನಡೆಯಲಿದ್ದು, ಫಲಿತಾಂಶ ಡಿ. ೩ರಂದು ಪ್ರಕಟವಾಗಲಿದೆ. ಪ್ರಚಾರದ ಕೊನೆಯ ದಿನವಾದ ಇಂದು ರಾಜಕೀಯ ಪಕ್ಷಗಳ ಮುಖಂಡರು ಬೃಹತ್ ಸಭೆಗಳನ್ನು ನಡೆಸಿದ್ದಾರೆ. ಎಲ್ಲಾ ೨೩೦ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಮಧ್ಯಪ್ರದೇಶದ ಎಲ್ಲಾ ೨೩೦ ವಿಧಾನಸಭಾ ಕ್ಷೇತ್ರಗಳಲ್ಲಿ ನಾಳೆ ಶುಕ್ರವಾರ ಬೆಳಗ್ಗೆ ೭ ಗಂಟೆಗೆ ಮತದಾನ ಆರಂಭವಾಗಲಿದೆ. ಮಧ್ಯಪ್ರದೇಶದಲ್ಲಿ ೫.೬ ಕೋಟಿ ಮತದಾರರಿದ್ದಾರೆ. ಇವರಲ್ಲಿ ೨.೮೮ ಕೋಟಿ ಪುರುಷ ಮತದಾರರು ಮತ್ತು ೨.೭೨ ಕೋಟಿ ಮಹಿಳಾ ಮತದಾರರಿದ್ದಾರೆ. ಒಟ್ಟು ೨೨.೩೬ ಲಕ್ಷ ಯುವಕರು ಪ್ರಥಮ ಬಾರಿಗೆ ಮತದಾನ ಮಾಡಲಿದ್ದಾರೆ. ಮತದಾನಕ್ಕೂ ಒಂದು ದಿನ ಮುಂಚಿತವಾಗಿ ಬಹಿರಂಗ ಪ್ರಚಾರ ಅಂತ್ಯವಾಗಿದೆ. ಅಭ್ಯರ್ಥಿಗಳು ಮನೆ ಮನೆ ತಿರುಗಿ ಪ್ರಚಾರ ಮಾಡುತ್ತಿದ್ದಾರೆ.

RELATED ARTICLES
- Advertisment -
Google search engine

Most Popular