ಶಿವಮೊಗ್ಗ: ಆಡಳಿತ ಪಕ್ಷದ ವಿಷಯ ಮಂಡನೆಗಳು, ವಿರೋಧ ಪಕ್ಷದ ಪ್ರಶ್ನೆ ಮತ್ತು ಚರ್ಚೆಗಳು, ಪರ ವಿರೋಧದ ಅಲೆಗಳು ಒಟ್ಟಾರೆ ಯುವ ಸಂಸತ್ತಿನ ಕಲಾಪಗಳು ಸಂಸತ್ತಿನ ಅಧಿವೇಶನವನ್ನು ನೆನಪಿಸುಂತಿತ್ತು. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ ಕರ್ನಾಟಕ ಸರ್ಕಾರದ ಸಚಿವಾಲಯ ಬೆಂಗಳೂರು ಹಾಗೂ ಜಿಲ್ಲಾ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಯುವ ಸಂಸದೀಯ ಪಟುಗಳು ಉತ್ತಮವಾಗಿ ತಮ್ಮ ಪಾತ್ರ ನಿರ್ವಹಣೆ ಮಾಡಿದರು.
ಮಾಸೂರು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿಯಾದ ನವ್ಯ ಕೆ.ಜಿ ಸಭಾಪತಿಯಾಗಿ ಉತ್ತಮವಾಗಿ ಅಧಿನವೇನದ ಕಲಾಪಗಳನ್ನು ನಡೆಸಿಕೊಟ್ಟರು. ಆರಂಭದಲ್ಲಿ ರಾಜಕಾರಣಿ ಸುಭದ್ರಮ್ಮನವರಿಗೆ ಆಡಳಿತ ಮತ್ತು ವಿರೋಧ ಪಕ್ಷದ ನಾಯಕರು ಸಂತಾಪ ಸೂಚಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ವಿರೋಧ ಪಕ್ಷದ ಸದಸ್ಯರು ಗೃಹಲಕ್ಷ್ಮಿ ಯೋಜನೆಯಡಿ ಇನ್ನೂ ಹಲವಾರು ಮಹಿಳಾ ಫಲಾನುಭವಿಗಳ ಖಾತೆಗೆ ಹಣ ಮಂಜೂರಾಗಿಲ್ಲ. ತಮ್ಮದು ಕೇವಲ ಹುಸಿ ಭರವಸೆ ನೀಡುವ ಸರ್ಕಾರ ಎಂದು ಮೂದಲಿಸಿದರು.
ಸುಭಾಷ್‍ನಗರ ಸರ್ಕಾರಿ ಪ್ರೌಢಶಾಲೆಯ ಭೂಮಿಕಾ ಮುಖ್ಯಮಂತ್ರಿ ಪಾತ್ರ ನಿರ್ವಹಿಸಿ, ನಮ್ಮದು ಮೌಲ್ಯಾಧಾರಿತ ರಾಜಕಾರಣ. ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಹಂತ ಹಂತವಾಗಿ ಎಲ್ಲ ಅರ್ಹ ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಜಮೆಯಾಗಲಿದೆ ಎಂದು ಸಮರ್ಥಿಸಿಕೊಂಡರು. ವಿರೋಧಪಕ್ಷದ ಸದಸ್ಯರು ಜಿಲ್ಲೆಯ ರಸ್ತೆಗಳಲ್ಲಿ ಗುಂಡಿ-ಗೊಟರುಗಳು ಬಿದ್ದಿದ್ದು ಹಾಳಾಗಿವೆ. ದೂರದರ್ಶಿತ್ವವಿಲ್ಲದೆ ಕಳಪೆ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ರಸ್ತೆಗಳ ನಿರ್ವಹಣೆಗೆ ಏನು ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಶ್ನಿಸಿದರು. ಲೋಕೋಪಯೋಗಿ ಸಚಿವರು ಉತ್ತರಿಸಿ, ತಮ್ಮ ಸರ್ಕಾರದ ಅವಧಿಯಲ್ಲಿ ನಿರ್ಮಿಸಿದ ರಸ್ತೆಗಳ ಕಥೆ ಹೀಗೆ ಆಗಿದೆ. ನಾವು ಉತ್ತಮ ರಸ್ತೆಗಳನ್ನು ನಿರ್ಮಿಸಲು ಯೋಜನೆಯನ್ನು ರೂಪಿಸಿಕೊಂಡಿದ್ದೇವೆ. ನಮ್ಮ ಸರ್ಕಾರ ಬಂದಾಗಿನಿಂದ ಅಪಘಾತಗಳ ಸಂಖ್ಯೆ ತೀರಾ ಕಡಿಮೆಯಾಗಿದೆ ಎಂದು ಉತ್ತರಿಸಿದರು.
ಸುಭಾಷ್‍ನಗರ್ ಸರ್ಕಾರಿ ಪ್ರೌಢಶಾಲೆಯ ಶೃತಿ ಬಿ ಎಸ್ ತೃತೀಯ, ಹೊಸನಗರ ತಾಲ್ಲೂಕಿನ ಮಸಗಲ್ಲಿ ಸ.ಪ್ರೌ.ಶಾ ಯ ವಿದ್ಯಾರ್ಥಿನಿ ಸಹನ ಕೆ ನಾಲ್ಕನೇ, ಮಾಸೂರು ಶಾಲೆಯ ನವ್ಯ ಕೆ.ಜಿ ಐದನೇ ಮತ್ತು ಕೊಮ್ಮನಾಳ್ ಶಾಲೆಯ ಹರ್ಷಿತಾ ಜಿ ಆರನೇ ಬಹುಮಾನ ಪಡೆದುಕೊಂಡರು.
