ಮಂಡ್ಯ: ರಾಜ್ಯ ಸರ್ಕಾರ ಮೊದಲು ತನ್ನ ಜವಾಬ್ದಾರಿ ನಿರ್ವಹಿಸಲಿ ಎಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು.
ಮಂಡ್ಯದಲ್ಲಿ ಬರ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಆರೋಪ ವಿಚಾರ ಕುರಿತು ಪ್ರತಿಕ್ರಿಯಿಸಿ, ರಾಜ್ಯ ಸರ್ಕಾರ ಮೊದಲು ತನ್ನ ಜವಾಬ್ದಾರಿ ನಿರ್ವಹಿಸಲಿ ಎಂದರು.
ಕೇವಲ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡೋದಲ್ಲ. ಮೊದಲು ತಮ್ಮ ಪಾಲಿನ ಬರ ಪರಿಹಾರ ಕೊಡಲಿ. ಆ ಮೂಲಕ ಜವಾಬ್ದಾರಿಯುತ ಸರ್ಕಾರ ಅನ್ನೋದನ್ನ ಸಾಬೀತು ಮಾಡಲಿ. ಆ ಬಳಿಕ ಕೇಂದ್ರದ ಮೇಲೆ ಆರೋಪ ಮಾಡಲಿ. ಬರೀ ಕೇಂದ್ರದ ವಿರುದ್ಧ ಆರೋಪ ಮಾಡುತ್ತಾ ಕಾಲ ಕಳೆದರೆ ಆಗೋದಿಲ್ಲ ಎಂದು ತಿರುಗೇಟು ನೀಡಿದರು.