Sunday, April 20, 2025
Google search engine

Homeರಾಜ್ಯಸುದ್ದಿಜಾಲನ.18, 19ರಂದು ಸ್ಪರ್ಧಾತ್ಮಾಕ ಪರೀಕ್ಷೆ ಕೆ.ಇ.ಎ ಮಾರ್ಗಸೂಚಿ ಪಾಲಿಸಿ: ಪಿ.ಎನ್ ಲೋಕೇಶ್

ನ.18, 19ರಂದು ಸ್ಪರ್ಧಾತ್ಮಾಕ ಪರೀಕ್ಷೆ ಕೆ.ಇ.ಎ ಮಾರ್ಗಸೂಚಿ ಪಾಲಿಸಿ: ಪಿ.ಎನ್ ಲೋಕೇಶ್

ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನ. ೧೮ ಮತ್ತು ೧೯ ರಂದು ನಗರದ ೧೮ ಪರೀಕ್ಷಾ ಕೇಂದ್ರಗಳಲ್ಲಿ ವಿವಿಧ ನಿಗಮ ಮಂಡಳಿಯಲ್ಲಿನ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಈ ವೇಳೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕೆ.ಇ.ಎ ಮಾರ್ಗಸೂಚಿಯನ್ನು ಅನುಸರಿಸುವ ಮೂಲಕ ಸುಗಮವಾಗಿ ಪರೀಕ್ಷೆಗಳನ್ನು ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಸೂಚಿಸಿದರು.

ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜರುಗಿದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನವೆಂಬರ್ ೧೮ರಂದು ನಗರದ ೩ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದೆ. ಬೆಳಿಗ್ಗೆ ೧೦ ರಿಂದ ೧ ರವರೆಗೆ ನಡೆಯುವ ಮೊದಲ ಅಧಿವೇಶನದಲ್ಲಿ ೪೫೮ ಅಭ್ಯರ್ಥಿಗಳು ಹಾಗೂ ಮಧ್ಯಾಹ್ನ ೨.೩೦ರಿಂದ ೪.೩೦ರವರೆಗೆ ನಡೆಯಲಿರುವ ಎರಡನೇ ಅಧಿವೇಶನದಲ್ಲಿ ೧೩೨೯ ಪರೀಕ್ಷೆ ಬರೆಯಲಿದ್ದಾರೆ. ನವೆಂಬರ್ ೧೯ ರಂದು ನಗರದ ೧೮ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಬೆಳಿಗ್ಗೆ ೧೦.೩೦ರಿಂದ ೧ರವರೆಗೆ ನಡೆಯುವ ಮೊದಲ ಅಧಿವೇಶನದಲ್ಲಿ ೮೦೦೦ ಅಭ್ಯರ್ಥಿಗಳು ಹಾಗೂ ಮಧ್ಯಾಹ್ನ ೨.೩೦ರಿಂದ ೪.೩೦ರವರೆಗೆ ನಡೆಯಲಿರುವ ಎರಡನೇ ಅಧಿವೇಶನದಲ್ಲಿ ೬೮೬೭ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷೆಯಲ್ಲಿ ಭಾಗವಹಿಸಲಿರುವ ಎಲ್ಲಾ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಸ್ಮಾರ್ಟ್ ವಾಚ್, ಮೊಬೈಲ್, ಕ್ಯಾಲ್ಕ್ಯುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ಕಡ್ಡಾಯವಾಗಿ ನಿ??ಧಿಸಿದೆ.
ಪರೀಕ್ಷೆಗಳು ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರದ ೨೦೦ಮೀ. ವ್ಯಾಪ್ತಿಯಲ್ಲಿ ನಿಷೇಧಜ್ಞೆ ಜಾರಿಯಲ್ಲಿರುತ್ತದೆ. ಮತ್ತು ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಕೇಂದ್ರದ ಸುತ್ತಮುತ್ತಲ ಪ್ರದೇಶದಲ್ಲಿ ಈಗಾಗಲೇ ನಿದಾಜ್ಞೆ ಜಾರಿಗೊಳಿಸಲಾಗಿದೆ ಎಂದರು.ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಲಾದ ಅಧಿಕಾರಿಗಳು, ಮೇಲ್ವಿಚಾರಕರು ಪರೀಕ್ಷಾ ಕೇಂದ್ರಗಳಲ್ಲಿ ಒಂದು ಗಂಟೆ ಮುಂಚಿತವಾಗಿ ಹಾಜರಿರಬೇಕು. ಪ್ರಶ್ನೆಪತ್ರಿಕೆ ಮತ್ತು ಓಎಂಆರ್ ಶೀಟ್‌ಗಳನ್ನು ಸರಿಯಾದ ಸಮಯಕ್ಕೆ ಪರೀಕ್ಷಾರ್ಥಿಗಳಿಗೆ ವಿತರಿಸಬೇಕು. ಯಾವುದೇ ಕಾರಣಕ್ಕೂ ಪರೀಕ್ಷಾ ಸಮಯದಲ್ಲಿ ಮೊಬೈಲ್ ಬಳಸಬಾರದು ಎಂದು ತಿಳಿಸಿದರು

RELATED ARTICLES
- Advertisment -
Google search engine

Most Popular