Sunday, April 20, 2025
Google search engine

Homeರಾಜ್ಯಮುರುಘಾಶ್ರೀಗೆ ಕಂಟಕ: 2ನೇ ಪೋಕ್ಸೋ ಪ್ರಕರಣದಲ್ಲಿ ಮತ್ತೆ ಬಂಧನ ಭೀತಿ

ಮುರುಘಾಶ್ರೀಗೆ ಕಂಟಕ: 2ನೇ ಪೋಕ್ಸೋ ಪ್ರಕರಣದಲ್ಲಿ ಮತ್ತೆ ಬಂಧನ ಭೀತಿ

ಚಿತ್ರದುರ್ಗ: ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಚಿತ್ರದುರ್ಗದ ಮುರುಘಾಶ್ರೀಗೆ 2ನೇ ಪ್ರಕರಣ ಕಂಟಕವಾಗಿದೆ.

2ನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುರುಘಾ ಶರಣರ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿದೆ.

ಈ ಹಿನ್ನೆಲೆಯಲ್ಲಿ 1ನೇ ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷಗಳ ಕಾಲ ಜೈಲಿನಲ್ಲಿದ್ದು, ಆಚೆ ಬಂದಿರುವ ಚಿತ್ರದುರ್ಗದ ಮುರುಘಾಶ್ರೀಗೆ ಇದೀಗ ಮತ್ತೆ ಬಂಧನದ ಭೀತಿ ಶುರುವಾಗಿದೆ.

ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪಿಐ ಮುದ್ದುರಾಜ ಅವರು ಕೋರ್ಟ್​ಗೆ ಆಗಮಿಸಿದ್ದು, ಕೋರ್ಟ್ ಆದೇಶ ಪಡೆದುಕೊಳ್ಳಲಿದ್ದಾರೆ. ಬಳಿಕ ದಾವಣಗೆರೆ ವಿರಕ್ತ ಮಠಕ್ಕೆ ತೆರಳಿ ಮುರುಘಾಶ್ರೀ ಅವರನ್ನು ಬಂಧಿಸುವ ಸಾಧ್ಯತೆಗಳಿವೆ. ಮತ್ತೊಂದೆಡೆ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಅರೆಸ್ಟ್​ ವಾರೆಂಟ್​ಅನ್ನು ಹೈಕೋರ್ಟ್​ನಲ್ಲಿ ಪ್ರಶ್ನಿಸಲು ಮುರುಘಾ ಶರಣರ ಪರ ವಕೀಲರು ಸಿದ್ಧತೆ ನಡೆಸಿದ್ದಾರೆ.

ಮಠದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮರುಘಾಶ್ರೀ ವಿರುದ್ಧ ಎರಡು ಪೋಕ್ಸೋಗಳು ದಾಖಲಾಗಿದ್ದವು. ಬಳಿಕ ಒಂದನೇ ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಒಂದು ವರ್ಷ ಕಾಲ ಜೈಲಿನಲ್ಲಿದ್ದರು. ನಂತರ ಅವರಿಗೆ ಮೊದಲನೇ ಪ್ರಕರಣದಲ್ಲಿ ಜಾಮೀನು ಸಿಕ್ಕಿದ್ದು, ನವೆಂಬರ್ 16ರಂದು ಚಿತ್ರದುರ್ಗ ಕಾರಾಗೃಹದಿಂದ ಬಿಡುಗಡೆಯಾಗಿದ್ದರು.

ಆದರೆ ಇದೀಗ ಅವರಿಗೆ ಎರಡನೇ ಪೋಕ್ಸೋ ಪ್ರಕರಣ ಕಂಟಕ ಎದುರಾಗಿದ್ದು, ಮತ್ತೆ ಜೈಲು ಸೇರುವ ಸಾಧ್ಯತೆಗಳಿವೆ.

RELATED ARTICLES
- Advertisment -
Google search engine

Most Popular