Tuesday, April 22, 2025
Google search engine

Homeರಾಜ್ಯಸುದ್ದಿಜಾಲನ.22 ರಂದು ರಾಜ್ಯಮಟ್ಟದ ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆ ಸ್ಪರ್ಧೆ

ನ.22 ರಂದು ರಾಜ್ಯಮಟ್ಟದ ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆ ಸ್ಪರ್ಧೆ

ಧಾರವಾಡ: ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಬೆಂಗಳೂರು ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಧಾರವಾಡ ಇವರ ಸಹಭಾಗಿತ್ವದಲ್ಲಿ ೨೦೨೩-೨೪ ನೇ ಸಾಲಿನ ರಾಜ್ಯ ಮಟ್ಟದ ರಾಷ್ಟ್ರ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆ ಸ್ಪರ್ಧಾ ಕಾರ್ಯಕ್ರಮಗಳು ಹಾಗೂ ರಾಷ್ಟ್ರೀಯ ಪಾತ್ರಾಭಿನಯ ಹಾಗೂ ರಾಷ್ಟ್ರೀಯ ಜಾನಪದ ನೃತ್ಯ ಸ್ಪರ್ಧೆ ಕಾರ್ಯಕ್ರಮಗಳು ನವೆಂಬರ್ ೨೨ ರಂದು ಬೆಳಿಗ್ಗೆ ೯ ಗಂಟೆಗೆ ಧಾರವಾಡದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಪ್ರಾರ್ಥನಾ ಮಂದಿರದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಘನ ಉಪಸ್ಥಿತರಿರುವರು. ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್.ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ, ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ ಅವರು ವಿಶೇಷ ಅತಿಥಿಗಳಾಗಿ ಆಗಮಿಸುವರು. ಶಾಸಕರಾದ ಅರವಿಂದ ಬೆಲ್ಲದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಶಾಸಕರಾದ ವಿನಯ ಕುಲಕರ್ಣಿ, ಅಬ್ಬಯ್ಯ ಪ್ರಸಾದ, ಎನ್.ಎಚ್ ಕೋನರಡ್ಡಿ, ಎಸ್.ವ್ಹಿ ಸಂಕನೂರ, ಪ್ರದೀಪ ಶೆಟ್ಟರ, ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ್, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ವೀಣಾ ಚೇತನ ಭರದ್ವಾಡ ಅವರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

RELATED ARTICLES
- Advertisment -
Google search engine

Most Popular