Tuesday, April 22, 2025
Google search engine

Homeರಾಜ್ಯಮದ್ದೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಉದಯ್

ಮದ್ದೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಉದಯ್

ಮದ್ದೂರು:  ತಾಲೂಕಿನ ಕೆಸ್ತೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹನುಮಂತಪುರ ಹಾಗೂ ಅಡಗನಹಳ್ಳಿ ಗ್ರಾಮದಲ್ಲಿ ಸುಮಾರು 150 ಲಕ್ಷ ರೂ. ವೆಚ್ಚದಲ್ಲಿ ನೀರಾವರಿ ಇಲಾಖೆಗೆ ಸಂಬಂಧಿಸಿದ  ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಉದಯ್ ಭೂಮಿ ಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಶಾಸಕ ಕೆ.ಎಂ.ಉದಯ್, ಮುಖ್ಯಮಂತ್ರಿ  ಸಿದ್ದರಾಮಯ್ಯ ನಮ್ಮ ನಿವಾಸಕ್ಕೆ ಆಗಮಿಸಿ,  ಔತಣಕೂಟ ಸ್ವೀಕರಿಸಿದರು. ಇದರಲ್ಲಿ ಯಾವುದೇ ರಾಜಕೀಯ ಬೆಳವಣಿಗೆಗಳಿಲ್ಲ ಎಂದರು.

ಮುಂದಿನ ದಿನಗಳಲ್ಲಿ ನಮ್ಮ ಕ್ಷೇತ್ರಕ್ಕೆ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಿಕೊಡುವಂತೆ ಮನವಿ ಮಾಡಿದ್ದು, ಅನುದಾನ ಬಿಡುಗಡೆ ಮಾಡುವ ಭರವಸೆಯನ್ನು ಸಿಎಂ ನೀಡಿದ್ದಾರೆ ಎಂದರು.

ಸರ್ಕಾರದ ಅಭಿವೃದ್ಧಿ ಕಾರ್ಯಗಳ ವಿಚಾರದಲ್ಲಿ ಕೆಲವರು ಅವಿವೇಕಿಗಳಂತೆ ಮಾತನಾಡುತ್ತಾರೆ ಅದಕ್ಕೆ ಬೆಲೆ ಕೊಡಬೇಕಾಗಿಲ್ಲ.  ಸರ್ಕಾರ ಈಗಷ್ಟೇ ಗ್ಯಾರಂಟಿಗಳನ್ನು ಈಡೇರಿಸುವ ಜತೆಗೆ ಎಲ್ಲವನ್ನ ಸರಿದೂಗಿಸಿಕೊಂಡು ಹೋಗುತ್ತಿದೆ.  ಮುಂದೇನೆ ದಿನಗಳಲ್ಲಿ ಎಲ್ಲವೂ ಸುಗಮವಾಗಿ ಸಾಗಲಿದೆ ಎಂದು ಭರವಸೆ ನೀಡಿದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪಕ್ಷದ ಅಧ್ಯಕ್ಷರಾಗಿ ಉತ್ತಮ ಸಂಘಟನೆ ಮಾಡಿದ್ದಾರೆ, ಸಿದ್ದರಾಮಯ್ಯ ಅವರು ಕೂಡ ನಮ್ಮ ನಾಯಕರೇ ಅದರಲ್ಲಿ ಯಾವುದೇ ಭೇದಭಾವವಿಲ್ಲ ಅವರು ಮದ್ದೂರಿಗೆ ಬಂದಿದ್ದರು ನಮ್ಮ ಮನೆಗೆ ಬರಬೇಕಿತ್ತು ಬಂದು ಹೋದರು ಎಂದರು.

ಈ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರವನ್ನ ಗೆಲ್ಲಲೇ ಬೇಕು, ಪಕ್ಷ ಸಂಘಟನೆಗೆ ಹೆಚ್ಚಿನ ಹೊತ್ತು ನೀಡಿ ಎಂದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಪ್ರಸ್ತುತ ಜಾರಿ ಮಾಡಿರುವ ಯೋಜನೆಗಳನ್ನು ಯಾವುದೇ ಸರ್ಕಾರ ಜಾರಿ ಮಾಡಿಲ್ಲ ಆಗುವುದೂ ಇಲ್ಲ.  ಹಾಗಾಗಿ ಬೇರೆ  ಪಕ್ಷಕ್ಕೆ ಮತ ನೀಡಿದರೆ ಯೋಜನೆಗಳನ್ನು ರದ್ದು ಮಾಡುತ್ತೇನೆಂದು ಡಿಕೆ ಶಿವಕುಮಾರ್ ಹೇಳಿದ್ದಾರೆ ಎಂದು ಸಮರ್ಥಿಸಿಕೊಂಡರು.

ಮದ್ದೂರು ತಾಲೂಕಿನ ವಿವಿಧ ಭಾಗಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು ಇದನ್ನು ತಡೆಗಟ್ಟುವ ಬಗ್ಗೆ ಅರಣ್ಯ ಮಂತ್ರಿಗಳಿಗೂ ಹಾಗೂ ಮಂಡ್ಯ ಜಿಲ್ಲಾ ಮಟ್ಟದ ಅಧಿಕಾರಿಗಳಿಗೂ ಈಗಾಗಲೇ ತಿಳಿಸಲಾಗಿದ್ದು ಕಾಡಿನಿಂದ  ತಪ್ಪಿಸಿಕೊಂಡು ಬಂದು ಗ್ರಾಮಗಳನ್ನು ಸೇರುತ್ತವೆ ಈ ಬಗ್ಗೆ ಸದ್ಯದಲ್ಲೇ ಸಭೆ ನಡೆಸಿ ಎಲ್ಲ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದರು.

ವಿಸಿನಲ್ಲಿ ಮೂಲಕ ಕಡೆ ಭಾಗಕ್ಕೆ ನೀರು ತಲುಪುತ್ತಿಲ್ಲ ಎಂಬ ಪ್ರಶ್ನೆಗೆ ನಾನು ಮುಂದಿನ ದಿನಗಳಲ್ಲಿ  ಎಲ್ಲ ಭಾಗಕ್ಕೂ ನೀರು ತಲುಪಿಸುವ ವ್ಯವಸ್ಥೆ ಮಾಡುತ್ತೇವೆ ಹಾಗೂ ನಾಲೆಗಳನ್ನು ಆಧುನಿಕರಣ ಮಾಡಲಾಗುವುದು ಎಂದರು.

ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಮಾಡುತ್ತಿರುವವರು  ಕೇಂದ್ರ ಮಟ್ಟದ್ದಾಗಿದ್ದು, ಮದ್ದೂರು ಪಟ್ಟಣ ವ್ಯಾಪ್ತಿಯಲ್ಲಿ ಮಾಡಿರುವ ಅವಜ್ಞಾನಿಕ ಕಾಮಗಾರಿಯನ್ನ ಶೀಘ್ರದಲ್ಲೇ ಬಗೆಹರಿಸುವುದಾಗಿ  ತಿಳಿಸಿದರು.

ಆತಗೂರು ಹೋ ಬಳಿಯ ಕೆರೆಗಳಿಗೆ ಶ್ರೀಘ್ರವಾಗಿ ನೀರು  ತುಂಬಿಸುವ ಯೋಜನೆ ಇನ್ನ ಎರಡು ಮೂರು ದಿನಗಳಲ್ಲಿ ಚಾಲನೆ ನೀಡಲಾಗುವುದು ಎಂದರು.

ಈ ವೇಳೆ ಕೆಪಿಸಿಸಿ ಸದಸ್ಯ  ರಾಮಕೃಷ್ಣ ಸೇರಿದಂತೆ ಇತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular