ರಾಮನಗರ: ನಿರುದ್ಯೋಗಯುವಕ, ಯುವತಿಯರಿಗೆ ಹೆಚ್ಚು ಉದ್ಯೋಗಕಲ್ಪಿಸಲು ಅವಕಾಶ ಕಲ್ಪಿಸುವಂತೆ ಕರ್ನಾಟಕ ಕೌಶಲ್ಯ ಪ್ರಾಧಿಕಾರದ ಅಧ್ಯಕ್ಷ ಡಾ.ರಮಣರೆಡ್ಡಿ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಚೇರಿಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿರುವ ಕಾಲೇಜುಗಳು ಹಾಗೂ ತರಬೇತಿ ಸಂಸ್ಥೆಗಳ ಮಾಹಿತಿಯನ್ನು ಪಡೆದುಕೊಂಡರು. ಜಿಲ್ಲೆಯಲ್ಲಿರುವ ನಿರುದ್ಯೋಗ ಯುವಕ ಯುವತಿಯರಿಗೆ ಅವರ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ಸೂಕ್ತ ತರಬೇತಿಗಳನ್ನು ನೀಡಿ ಉದ್ಯೋಗ ಪಡೆಯಲು ಅವಕಾಶ ಕಲ್ಪಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿರು ವತರಬೇತಿ ಕೇಂದ್ರಗಳಲ್ಲಿ ಸೂಕ್ತ ತರಬೇತುದಾರರನ್ನು ನೇಮಿಸಿ ತರಬೇತಿ ನೀಡುವಂತೆ ಹಾಗೂ ಹೆಚ್ಚು ಹೆಚ್ಚು ತರಬೇತಿಗಳನ್ನು ಆಯೋಜಿಸುವಂತೆ ತಿಳಿಸಿದರು. ಜಿಲ್ಲಾಧಿಕಾರಿಡಾ.ಅವಿನಾಶ್ ಮೆನನ್‌ರಾಜೇಂದ್ರನ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಾಹಕಅಧಿಕಾರಿದಿಗ್ವಿಜಯ್ ಬೋಡ್ಕೆ, ಜಿಲ್ಲಾಕೌಶಲ್ಯಾಭಿವೃದ್ದಿಇಲಾಖೆಯ ಉಪ ನಿರ್ದೇಶಕಉಮೇಶ್ ಹಾಗೂ ಇತರರುಸಭೆಯಲ್ಲಿಉಪಸ್ಥಿತರಿದ್ದರು.