Monday, April 21, 2025
Google search engine

Homeರಾಜ್ಯಸುದ್ದಿಜಾಲಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ

ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ

ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದೊಂದಿಗೆ ಸೋಮವಾರ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಜಿಲ್ಲೆಯ ವಿವಿಧೆಡೆಯಿಂದ 100 ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ 9-12 ಹಾಗೂ 13-16 ವರ್ಷದ ಮಕ್ಕಳಿಗಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ಆಯೋಜಿಸಲಾಗಿತ್ತು ಹಾಗೂ ಜಿಲ್ಲಾ ಮಟ್ಟದಿಂದ ಆಯ್ಕೆಯಾದ ಮಕ್ಕಳನ್ನು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಲಾಯಿತು. ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರಾದ ಬಸವರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಣಾಧಿಕಾರಿ ಮಹಾದೇವ ಸ್ವಾಮಿ, ಡಿಡಿಪಿಐ ಕಚೇರಿಯ ಕೃಷ್ಣಪ್ಪ ಎಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ನಟರಾಜ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸದಾಶಿವ ಪಲ್ಲೇದ್, ಮಡಿಕೇರಿ ತಾಲ್ಲೂಕು ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸವಿತಾ ಹಾಗೂ ತೀರ್ಪುಗಾರರು ಮತ್ತು ಪೆÇೀಷಕರು ಭಾಗವಹಿಸಿದ್ದರು.

ಮಕ್ಕಳು ಓದಿನ ಜೊತೆಗೆ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ತಮ್ಮ ಪ್ರತಿಭೆಯನ್ನು ಅನಾವರಣ ಮಾಡಲು ಇಂತಹ ಕಾರ್ಯಕ್ರಮಗಳು ಅವಕಾಶವಾಗಿದೆ. ಇಂತಹ ಅವಕಾಶಗಳನ್ನು ಬಳಸಿಕೊಂಡು ಸಾಹಿತ್ಯ, ಸಂಗೀತ, ಸಾಂಸ್ಕøತಿಕ, ಸಂಗೀತ, ಹಾಡುಗಾರಿಕೆ ಮತ್ತಿತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. ಶಿಕ್ಷಣಾಧಿಕಾರಿ ಮಕ್ಕಳು ವಿವಿಧ ಸಾಂಸ್ಕøತಿಕ ಕಲಾ ಪ್ರಕಾರಗಳಲ್ಲಿ ಪಾಲ್ಗೊಳ್ಳುವುದರಿಂದ ಉತ್ಸಾಹ ಹೆಚ್ಚಾಗುತ್ತದೆ. ಇದರಿಂದ ಪಠ್ಯ ಹಾಗೂ ಸಾಂಸ್ಕøತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಅವರು ಅಭಿಪ್ರಾಯ ಪಟ್ಟರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್ ಅವರು ಸ್ಪರ್ಧಾ ಮಾರ್ಗಸೂಚಿ ನಿಯಮಗಳ ಬಗ್ಗೆ ಹಲವು ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ವಹಿಸಿದ್ದರು. ಮಕ್ಕಳ ಸ್ಪರ್ಧಾ ಕಾರ್ಯಕ್ರಮದಲ್ಲಿ ಚಿತ್ರಕಲಾ ವಿಭಾಗದಲ್ಲಿ ಫರ್ಹಾನ, ತಶ್ಮಿಕ, ಪ್ರಣವತಿ ರಾಮ ಕೃಷ್ಣ, ಮೊಹಮ್ಮದ್ ಸುಹಾನ್ ವಿಜ್ಞಾನ ಸೃಜನಾತ್ಮಕ ಶಿವಕುಮಾರ್ ಎಚ್.ಆರ್ ಹಾಗೂ ಭೂಮಿಕಾ ಜೆ.ಕೆ ಸೃಜನಾತ್ಮಕ ಪ್ರದರ್ಶನ ಕಲೆಗಳಲ್ಲಿ ದಿಶಿಕಾ ಸಿ,ಹೆಚ್, ಯಶಿಕಾ ಬಿ.ಎಂ, ಅನಘ ಬಿ,ಎಸ್, ಧನ್ಯ ಕೆ, ಮಕ್ಕಳು ರಾಜ್ಯ ಮಟ್ಟಕ್ಕೆ ಆಯ್ಕೆಯಾದರು ಹಾಗೂ ಜಿಲ್ಲಾ ಮಟ್ಟದಿಂದ ಆಯ್ಕೆಯಾದ ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರು ಬಹುಮಾನವನ್ನು ಹಾಗೂ ಪ್ರಮಾಣ ಪತ್ರವನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಪ್ರಶಂಸನಾ ಪತ್ರವನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸವಿತಾ ಅವರು ಸ್ವಾಗತಿಸಿದರು.

RELATED ARTICLES
- Advertisment -
Google search engine

Most Popular