Saturday, April 19, 2025
Google search engine

Homeರಾಜ್ಯಸುದ್ದಿಜಾಲಬೆಂಗಳೂರು-ಮೈಸೂರು ಸಾರಿಗೆ ಬಸ್ ದರ ಹೆಚ್ಚಳ: ಕೆಎಸ್‌ಆರ್‌ಟಿಸಿ ಸ್ಪಷ್ಟನೆ

ಬೆಂಗಳೂರು-ಮೈಸೂರು ಸಾರಿಗೆ ಬಸ್ ದರ ಹೆಚ್ಚಳ: ಕೆಎಸ್‌ಆರ್‌ಟಿಸಿ ಸ್ಪಷ್ಟನೆ

ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿ ಯೋಜನೆ ಆರಂಭದ ಬಳಿಕ ಸಾರಿಗೆ ಬಸ್‌ಗಳಲ್ಲಿ ಓಡಾಡುವವರ ಸಂಖ್ಯೆ ಹೆಚ್ಚಾಗಿದೆ. ಮೈಸೂರು ದಸರಾ, ಹಾಸನಾಂಬ ಉತ್ಸವ ಸೇರಿದಂತೆ ರಾಜ್ಯದ ವಿವಿಧ ಪ್ರಮುಖ ಕಾರ್ಯಕ್ರಮಗಳಿಗೆ ಈ ಬಾರಿ ಜನ ಸಂಖ್ಯೆ ಹೆಚ್ಚಾಗಿದೆ. ಮಹಿಳೆಯರು ಉಚಿತ ಪ್ರಯಾಣವನ್ನು ಸದ್ಭಳಕೆ ಮಾಡಿಕೊಳ್ಳುತ್ತಿದ್ದು, ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ.

ಮೈಸೂರು-ಬೆಂಗಳೂರು ಸಾರಿಗೆ ಬಸ್‌ಗಳ ದರ ಏರಿಕೆಯಾಗಿರುವುದು ಕಂಡು ಬಂದಿತ್ತು. ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ದರ ಏರಿಕೆ ಮಾಡಿರುವ ಆರೋಪ ಕೂಡ ಕೇಳಿಬಂದಿತ್ತು.

ಮೈಸೂರು ಎಕ್ಸ್‌ಪ್ರೆಸ್ ವೇ ಎರಡು ಟೋಲ್‌ಗಳ ದರದಲ್ಲಿ ಏಕಮಾರ್ಗದಲ್ಲಿಯೇ ೧೦೯೦ ಹೆಚ್ಚಳವಾಗಿದೆ. ಇದರಿಂದ, ಪ್ರಯಾಣ ದರದಲ್ಲಿ ಟೋಲ್ ಹಣವನ್ನು ಸೇರ್ಪಡೆಗೊಳಿಸಿ, ಹೆಚ್ಚಳ ಮಾಡಲಾಗಿತ್ತು. ಈ ದರವು ಎಕ್ಸ್‌ಪ್ರೆಸ್ ವೇ ಅಲ್ಲಿ ಕಾರ್ಯಾಚರಣೆಯಾಗುವ ತಡೆರಹಿತ ಬಸ್‌ಗಳಿಗೆ ಮಾತ್ರ ಅನ್ವಯಿಸುತ್ತದೆ. ಎಕ್ಸ್‌ಪ್ರೆಸ್ ವೇ ಹೊರತುಪಡಿಸಿ ನೇರ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ವೇಗದೂತ ಸಾರಿಗೆಗಳಲ್ಲಿ ಈಗಲೂ ಹಳೆಯ ಪ್ರಯಾಣ ದರವೇ ಚಾಲ್ತಿಯಲ್ಲಿದೆ ಎಂದು ಸ್ಪಷ್ಟಣೆ ನೀಡಿದೆ.

RELATED ARTICLES
- Advertisment -
Google search engine

Most Popular