ತುಮಕೂರು: ನೀರಿಲ್ಲದ ಪಾಳು ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಿಸಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಮಾರನಗೆರೆಯಲ್ಲಿ ನಡೆದಿದೆ.
ಹಲವು ದಿನಗಳಿಂದ ಗ್ರಾಮದ ಬಳಿ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದವು. ಅದರಲ್ಲಿ ಮೂರು ಚಿರತೆಗಳು ಪದೇ ಪದೇ ಕಾಣಿಸಿಕೊಳ್ಳುತ್ತಿದ್ದವು. ನಿನ್ನೆ ಒಂದು ಮೇಕೆಯನ್ನು ಚಿರತೆ ತಿಂದಿದೆ.

ಇಂದು ಆಹಾರ ಅರಸಿ ಗ್ರಾಮಕ್ಕೆ ಬಂದಿದ್ದ ಚಿರತೆ ಪಾಳುಬಾವಿಗೆ ಬಿದ್ದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ರಕ್ಷಿಸಿದ್ದಾರೆ.
ಚಿರತೆಯನ್ನು ನೋಡಲು ಸಾರ್ವಜನಿಕರು ಪಾಳು ಬಾವಿಯ ಬಳಿ ಜಮಾಯಿಸಿದ್ದರು.